ಕರ್ನಾಟಕ

karnataka

ETV Bharat / crime

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನಿವಾಸದ ಮುಂದೆ ಡೆತ್​ನೋಟ್​​ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಯತ್ನ - ಡೆತ್​ನೋಟ್​​ ಬರೆದಿಟ್ಟು ಮಹಿಳೆ ಆತ್ಮಹತ್ಯಾ ಯತ್ನ

ಹಲವು ಬಾರಿ ಮನೆ ಕಳೆದುಕೊಂಡಿದ್ದಕ್ಕೆ ಪರಿಹಾರ ನೀಡದ್ದರಿಂದ ನೊಂದ ಮಹಿಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆ ಮುಂದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

woman-suicide-attempt-infront-of-union-minister-prahlad-joshi-home
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನಿವಾಸದ ಮುಂದೆ ಡೆತ್​ನೋಟ್​​ ಬರೆದಿಟ್ಟು ಮಹಿಳೆ ಆತ್ಮಹತ್ಯಾ ಯತ್ನ

By

Published : Apr 6, 2021, 8:13 PM IST

ಹುಬ್ಬಳ್ಳಿ :ಬಿದ್ದ ಮನೆಯ ಪರಿಹಾರಕ್ಕಾಗಿ ಅಲೆದು ಅಲೆದು ಸುಸ್ತಾದ ಮಹಿಳೆಯೊಬ್ಬರು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮನೆ ಎದುರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.‌

ಧಾರವಾಡ ತಾಲೂಕಿನ ಗರಗ ಗ್ರಾಮದ ಶ್ರೀದೇವಿ ವೀರಪ್ಪ ಕಮ್ಮಾರ ಎಂಬ ಮಹಿಳೆಯೇ ಆತ್ಮಹತ್ಯೆಗೆ ಯತ್ನಿಸಿದವರು. ಕಳೆದ ಮಳೆಗಾಲದ ಸಮಯದಲ್ಲಿ ಅತಿವೃಷ್ಟಿಯಿಂದ ಇವರ ಮನೆ ಬಿದಿದ್ದು, ಅದರ ಪರಿಹಾರಕ್ಕಾಗಿ ಕಳೆದ ಐದು ತಿಂಗಳ ಹಿಂದೆ ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ ಹತ್ತಿರ ಹೋಗಿ ಕೇಳಿದ್ದಾರೆ. ಅವರು ಸಂಸದರ ಬಳಿ ಹೋಗುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿಂದು 6 ಸಾವಿರ ದಾಟಿದ ಕೋವಿಡ್ ಕೇಸ್​​​: 39 ಮಂದಿ ಸಾವು

ಕೇಂದ್ರ ಸಚಿವ ಪ್ರಹ್ಲಾದ್​ ಜೋಷಿ ಅವರ ಮನೆಗೂ ಭೇಟಿ ನೀಡಿ ಹಲವು ಬಾರಿ ಪರಿಹಾರ ಕೇಳಿದ್ದಾರೆ. ಅವರು ಕೂಡ ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದ ಶ್ರೀದೇವಿ ಇಂದು ಕೇಂದ್ರ ಸಚಿವರ ಮನೆ ಎದುರು ಡೇತನೋಟ್​ ಬರೆದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ‌.

ತೀವ್ರವಾಗಿ ಅಸ್ವಸ್ಥಗೊಂಡ ಇವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details