ಕರ್ನಾಟಕ

karnataka

ETV Bharat / elections

ಸೋಲನ್ನು ಗೌರವಯುತವಾಗಿ ಸ್ವೀಕರಿಸಿ... ವಿಪಕ್ಷಗಳಿಗೆ ಕೇಂದ್ರ ಸಚಿವ ಸಲಹೆ - ಇವಿಎಂ

ಇವಿಎಂ ವಿಶ್ವಾಸಾರ್ಹತೆಯ ಬಗ್ಗೆ ಚಂದ್ರಬಾಬು ನಾಯ್ಡು ಸೇರಿದಂತೆ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಅನುಮಾನ ತೋರ್ಪಡಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗವನ್ನು ಭೇಟಿಯಾಗಿ ತಮ್ಮ ಅಹವಾಲನ್ನು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ

By

Published : May 22, 2019, 9:36 AM IST

ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳು ಎನ್​ಡಿಎ ಪರವಾಗಿ ಭವಿಷ್ಯ ನುಡಿದಿದ್ದು, ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಇವಿಎಂ ಕುರಿತಂತೆ ಅನುಮಾನ ವ್ಯಕ್ತಪಡಿಸಲು ಶುರು ಮಾಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ವಿಪಕ್ಷಗಳಿಗೆ ಟಾಂಗ್ ನೀಡಿದ್ದಾರೆ.

"ಒಂದು ವೇಳೆ ಎನ್​ಡಿಎ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬಂದರೆ ಆ ವೇಳೆ ಸೋಲನ್ನು ಸ್ವೀಕರಿಸುವ ಗುಣ ಬೆಳೆಸಿಕೊಳ್ಳಿ, ಅದರ ಬದಲಾಗಿ ಇವಿಎಂ ಬಗ್ಗೆ ಸಂಶಯ ವ್ಯಕ್ತಪಡಿಸುವುದು ಸರಿಯಲ್ಲ ಎಂದಿದ್ದಾರೆ."

ಹೆಚ್ಚಿನ ಓದಿಗಾಗಿ:

ಫಲಿತಾಂಶದ ನಂತರ ಸರ್ಕಾರ ರಚನೆ ಬಗ್ಗೆ ಚರ್ಚೆ: ದೊಡ್ಡಗೌಡರ ನಿವಾಸದಲ್ಲಿ ಆಂಧ್ರ ಸಿಎಂ

"ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಸಿಎಂ ಆಗಿ ನೇಮಕವಾದಾಗ ಇವಿಎಂ ಸರಿಯಾಗಿತ್ತು, ಅಮರೀಂದರ್ ಸಿಂಗ್ ಪಂಜಾಬ್ ಸಿಎಂ ಹಾಗೂ ಚಂದ್ರಬಾಬು ನಾಯ್ಡು ಆಂಧ್ರ ಸಿಎಂ ಆದಾಗ ಇವಿಎಂ ಸರಿಯಿತ್ತು ಆದರೆ ಇದೀಗ ವಿಪಕ್ಷಗಳು ಇವಿಎಂ ಬಗ್ಗೆ ಕ್ಯಾತೆ ತೆಗೆಯುತ್ತಿವೆ" ಎಂದು ರವಿಶಂಕರ್​​ ಪ್ರಸಾದ್ ವ್ಯಂಗ್ಯವಾಡಿದ್ದಾರೆ.

ಇವಿಎಂ ವಿಶ್ವಾಸಾರ್ಹತೆಯ ಬಗ್ಗೆ ಚಂದ್ರಬಾಬು ನಾಯ್ಡು ಸೇರಿದಂತೆ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ಅನುಮಾನ ತೋರ್ಪಡಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗವನ್ನು ಭೇಟಿಯಾಗಿ ತಮ್ಮ ಅಹವಾಲನ್ನು ಸಲ್ಲಿಸಿದ್ದಾರೆ.

ABOUT THE AUTHOR

...view details