ಹುಬ್ಬಳ್ಳಿ: ಕುಂದಗೋಳ ಉಪಚುನಾವಣೆಗೆ ಇದುವರೆಗೂ ಉಸ್ತುವಾರಿ ನೇಮಕ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕುಂದಗೋಳ ಉಪಚುನಾವಣೆಗೆ ಉಸ್ತುವಾರಿ ನೇಮಕವಾಗಿಲ್ಲ: ದಿನೇಶ್ ಗುಂಡೂರಾವ್ - dinesh
ಶಾಸಕ ಸಿಎಸ್ ಶಿವಳ್ಳಿ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇನ್ನೂ ಉಸ್ತುವಾರಿಯನ್ನು ನೇಮಕ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ
ಕುಂದಗೋಳ
ಕುಂದಗೋಳ ವಿಧಾನಸಭಾ ಉಪಚುನಾವಣೆಯಲ್ಲಿ ಟಿಕೆಟ್ ಕುರಿತು ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಅಸಮಾಧಾನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಿದರು.
ಚುನಾವಣೆ ಉಸ್ತುವಾರಿ ಬಗ್ಗೆ ಮೇ3 ರಂದು ಹುಬ್ಬಳ್ಳಿಯಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು. ಇಲ್ಲಿ ಯಾರೂ ನಾಯಕರಿಲ್ಲ. ಸಚಿವರು, ಶಾಸಕರು, ಕಾರ್ಯಕರ್ತರು ಎಲ್ಲರೂ ಪಕ್ಷದ ಆದೇಶ ಪಾಲನೆ ಮಾಡಬೇಕು. ಈಗಾಗಲೇ ಇಂದಿನ ಸಭೆಯಲ್ಲಿ ಕಾರ್ಯಕರ್ತರೊಂದಿಗೆ ಚುನಾವಣೆ ಕುರಿತಾಗಿ ಚರ್ಚೆ ಮಾಡಲಾಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.