ಧಾರವಾಡ:ಧಾರವಾಡ ಲೋಕಸಭಾ ಚುನಾವಣೆ ರಂಗೇರುತ್ತಿದ್ದು, ಲೋಕಸಭೆ ಕಾವು ದಿನೇದಿನೆ ಹೆಚ್ಚುತ್ತಿದೆ. ಜೊತೆಗೆ ವಿವಿಧ ಕಾರಣಗಳಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗವು ಘೋಷಣೆ ಮಾಡಿದೆ.
ಸಚಿವ ಸಿ.ಎಸ್ ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭೆ ಕ್ಷೇತ್ರಕ್ಕೂ ಚುನಾವಣೆ ನಡೆಯಲಿದ್ದು, ತಾಲೂಕಿನ ಜನತೆ ಎರಡೆರಡು ಚುನಾವಣೆ ಎದುರಿಸುವಂತಾಗಿದೆ. ಈ ಕುರಿತು ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಜಿಲ್ಲಾ ಚುನಾವಣಾಧಿಕಾರಿ ದೀಪಾ ಚೋಳನ್ ಸುದ್ದಿಗೋಷ್ಠಿ ಏಪ್ರಿಲ್ 22 ರಿಂದ ಕುಂದಗೋಳ ವಿಧಾನಸಭೆ ಚುನಾವಣೆ ಪ್ರಕ್ರಿಯೆಗಳು ಆರಂಭಗೊಳ್ಳಲಿದ್ದು, ಏಪ್ರಿಲ್ 29 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 30ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಮೇ 2 ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದ್ದು, ಮೇ 19 ರಂದು ಮತದಾನ ನಡೆಯಲಿದೆ.
ಮೇ 23ರಂದುಲೋಕಸಭಾ ಚುನಾವಣೆ ಫಲಿತಾಂಶದ ದಿನವೇ ಕುಂದಗೋಳ ವಿಧಾನಸಭೆ ಚುನಾವಣೆ ಫಲಿತಾಂಶವೂ ಸಹ ಹೊರಬೀಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದು, ಮಾದರಿ ನೀತಿ ಸಂಹಿತೆ ಲೋಕಸಭೆ ಚುನಾವಣೆಯ ಪ್ರಕಾರವೇ ಮುಂದುವರೆಯಲಿದೆ ಎಂದು ಹೇಳಿದರು.