ಹುಬ್ಬಳ್ಳಿ:ಬಿಜೆಪಿ ಸರ್ಕಾರ ಸಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಿದೆ. ಇದಕ್ಕೂ ಜನರು ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ರಾಜ್ಯ ಸಭೆ ಸದಸ್ಯ ಎಲ್ ಹನುಮಂತಯ್ಯ ಹೇಳಿದರು.
ಸಂವಿಧಾನ ಉಳಿವಿಗಾಗಿ ಬಿಜೆಪಿ ಸೋಲಿಸಲಿದ್ದಾರೆ : ಎಲ್. ಹನುಮಂತಯ್ಯ - hubballi
ಪ್ರಧಾನಿ ಮೋದಿಗೆ ಅಭಿವೃದ್ಧಿಯ ಬಗ್ಗೆ ಮಾತನಾಡಲು ವಿಷಯಗಳಿಲ್ಲ, ದೇಶದ ಭದ್ರತೆಯ ಹೆಸರಿನಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಎಲ್ ಹನುಮಂತಯ್ಯ ಆರೋಪಿಸಿದ್ದಾರೆ.
ರಾಜ್ಯ ಸಭೆ ಸದಸ್ಯ ಎಲ್ ಹನುಮಂತಯ್ಯ
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸೈನಿಕರನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಇದರ ವಿರುದ್ದ ನಿವೃತ್ತ ಸೈನಿಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿವೃದ್ದಿ ಬಗ್ಗೆ ಮಾತನಾಡಲು ವಿಷಯಗಳಿಲ್ಲ. ಹೀಗಾಗಿ ದೇಶದ ಭದ್ರತೆಯ ಹೆಸರಿನಲ್ಲಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.