ಚಿತ್ರದುರ್ಗ:ಕೋಟೆ ನಾಡಿಗೆ ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಸಮಾವೇಶ ಏರ್ಪಡಿಸಿದ್ದು, ಕೈ ಭದ್ರಕೋಟೆಯಲ್ಲಿ ಬಿಜೆಪಿ ರಣಕಹಳೆ ಮೊಳಗಿಸಲಿದೆ.
ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಕೂರಲು ಸುಮಾರು 60 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿಶೇಷ ಆಹ್ವಾನಿತರಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಇದೆ. ಈಗಾಗಲೇ ಕಾರ್ಯಕರ್ತರು ಸಮಾವೇಶದ ಸ್ಥಳದತ್ತ ಆಗಮಿಸುತ್ತಿದ್ದಾರೆ.