ಕರ್ನಾಟಕ

karnataka

ETV Bharat / elections

ಜನವಿರೋಧಿ ವ್ಯವಸ್ಥೆಗೆ ಬದಲಾಗಿ ಕರ್ನಾಟಕ ರಾಷ್ಟ್ರ ಸಮಿತಿ ನೂತನ ಪಕ್ಷ: ರವಿಕೃಷ್ಣಾ ರೆಡ್ಡಿ - kannada news paper

ಕರ್ನಾಟಕ ರಾಷ್ಟ್ರ ಸಮಿತಿ ಎಂಬ ನೂತನ ಪ್ರಾದೇಶಿಕ ಪಕ್ಷ ಅಸ್ತಿತ್ವಕ್ಕೆ ಬಂದಿದ್ದು, ಚುನಾವಣಾ ಕಣಕ್ಕಿಳಿಯಲು ಸಿದ್ಧವಾಗಿದೆ.

ಕರ್ನಾಟಕ ರಾಷ್ಟ್ರಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ರವಿ ಕಷ್ಣಾರೆಡ್ಡಿ

By

Published : Apr 12, 2019, 5:00 PM IST

ಹಾಸನ: ಜನವಿರೋಧಿ ವ್ಯವಸ್ಥೆಗೆ ಬದಲಾಗಿ ಸ್ವಚ್ಛ, ಪ್ರಾಮಾಣಿಕ ಹಾಗೂ ಜನಪರ ರಾಜಕಾರಣಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಎಂಬ ನೂತನ ಪ್ರಾದೇಶಿಕ ಪಕ್ಷವನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ರವಿಕಷ್ಣಾ ರೆಡ್ಡಿ ಹೇಳಿದರು.

ರಾಜ್ಯದಲ್ಲಿ ಅನೀತಿ, ಅನ್ಯಾಯ ಹಾಗೂ ದುರಾಡಳಿತ ಹೆಚ್ಚುತ್ತಿವೆ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ಮತ್ತು ಸ್ವಜನ ಪಕ್ಷಪಾತ ಮುಂತಾದ ಪ್ರಜಾಪ್ರಭುತ್ವ, ಜನವಿರೋಧಿ ವ್ಯವಸ್ಥೆಗೆ ರಾಜ್ಯದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ ಮೂರು ಪಕ್ಷಗಳು ಅನೀತಿಯ ರಾಜಕಾರಣ ನಡೆಸುತ್ತಿವೆ. ಈ ಮೂರು ಪಕ್ಷಗಳಿಗೆ ಪರ್ಯಾಯವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಅಸ್ತಿತ್ವಕ್ಕೆ ಬಂದಿದೆ ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕರ್ನಾಟಕ ರಾಷ್ಟ್ರಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ರವಿ ಕಷ್ಣಾರೆಡ್ಡಿ

ಜಿಲ್ಲೆಯಲ್ಲಿ ಇಂದು ಕುಟುಂಬ ರಾಜಕಾರಣ ನಡೆಯುತ್ತಿದೆ. ತಾತ, ತಂದೆಯಿಂದ ಏನೆಲ್ಲಾ ರಾಜಕೀಯ ಸೌಲತ್ತುಗಳು ಸಿಗುತ್ತವೆ ಎಂದು ಹವಣಿಸುತ್ತಿದ್ದಾರೆ. ವೈಯಕ್ತಿಕ ಮೌಲ್ಯಗಳ ಬಗ್ಗೆ ಹೆಮ್ಮೆ ಪಡುವ ಪಕ್ಷದ ಅನಿವಾರ್ಯವಿದೆ. ಸಮಾಜದಲ್ಲಿ ಪ್ರಾಮಾಣಿಕ ನಾಯಕತ್ವ ವ್ಯಕ್ತಪಡಿಸಲು ನಮ್ಮ ಪಕ್ಷದಲ್ಲಿ ಅವಕಾಶವಿದೆ ಎಂದರು.

ಈಗಾಗಲೇ ಚುನಾವಣಾ ಆಯೋಗದಿಂದ ಪಕ್ಷವನ್ನು ನೋಂದಣಿ ಮಾಡುವ ಪ್ರಕಿಯೆ ಅಂತಿಮ ಹಂತದಲ್ಲಿದೆ. ಹಲವು ಜಿಲ್ಲೆಗಳಲ್ಲಿ ಸಮಿತಿ ಹಾಗೂ ಘಟಕಗಳನ್ನು ರಚಿಸಿದ್ದು, ಒಟ್ಟು 12 ಕ್ಷೇತ್ರಗಳಲ್ಲಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ನಂತರದ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ, ನಗರಸಭೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತಿಸಲಾಗಿದೆ. ಅಲ್ಲದೆ, ಕುಂದಗೂಳ ಹಾಗೂ ಚಿಂಚೋಳಿ ಉಪ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸುವರು ಎಂದರು.

ABOUT THE AUTHOR

...view details