ಕಲಬುರಗಿ: ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಚಿಂಚೋಳಿ ಕ್ಷೇತ್ರದ ಜನತೆಗೆ ಭರವಸೆ ನೀಡಿದ್ದಾರೆ.
ಚಿಂಚೋಳಿ ದತ್ತು ಪಡೆದು ಅಭಿವೃದ್ಧಿ ಮಾಡುತ್ತೇವೆ:ಹೆಚ್‌ಡಿಕೆ
ಸಮ್ಮಿಶ್ರ ಸರ್ಕಾರದಲ್ಲಿ ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ಪಡೆದು ಅಭಿವೃದ್ಧಿ ಮಾಡುತ್ತೇವೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ
ಚಿಂಚೋಳಿಯಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ, ಚಿಂಚೋಳಿ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಂಡು ಸರ್ಕಾರದ ಯೋಜನೆಗಳನ್ನು ನಿಮ್ಮ ಮನೆ ಬಾಗಿಲಿಗೆ ತರುತ್ತೇವೆ ಎಂದು ಹೇಳಿದರು.
ಮಲ್ಲಿಕಾರ್ಜುನ ಖರ್ಗೆಯವರನ್ನು ಮರವಾಗಿ ಬೆಳೆಸಿದ್ದೀರಿ, ಅವರನ್ನು ಗೌರವಿಸಿ ಮಹಾನ್ ನಾಯಕನ ಮಹತ್ವವನ್ನು ತಿಳಿದುಕೊಳ್ಳಿ. ಅವರ ಪರವಾಗಿ ನಾನು ಈ ಮಾತನ್ನು ಹೇಳುತ್ತಿದ್ದೇನೆ. ಸಮ್ಮಿಶ್ರ ಸರಕಾರದಲ್ಲಿ ಚಿಂಚೋಳಿಯನ್ನು ದತ್ತು ಪಡೆದು ಅಭಿವೃದ್ಧಿ ಮಾಡುತ್ತೇವೆ ಎಂದು ಸಿಎಂ ಭರವಸೆ ಕೊಟ್ಟರು.
Last Updated : May 15, 2019, 7:45 AM IST