ಬಾಗಲಕೋಟೆ: ಮತಗಟ್ಟೆ ಹತ್ತಿರ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದು ಕೈ ಕೈ ಮಿಲಾಸುವ ಹಂತಕ್ಕೆ ಹೋದ ಘಟನೆ ನಗರದಲ್ಲಿ ನಡೆದಿದೆ. ಎರಡು ಪಕ್ಷದ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆದ ಹಿನ್ನೆಲೆ ಕಾರ್ಯಕರ್ತರನ್ನು ಚದುರಿಸಲು ಪೋಲಿಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.
ಕೈ-ಕಮಲ ಕಾರ್ಯಕರ್ತರ ಮಧ್ಯೆ ಫೈಟ್.... ಪೊಲೀಸರಿಂದ ಲಘು ಲಾಠಿ ಪ್ರಹಾರ - kannada news
ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ವಾಗ್ವಾದ ಉಂಟಾಗಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಗರದಲ್ಲಿ ಜರುಗಿದೆ.
ನಗರದ ಪಂಕಾ ಮಸೀದಿ ಬಳಿ ಮತಗಟ್ಟೆ ಸಂಖ್ಯೆ 2ರ ಮುಂದೆ ಈ ಘಟನೆ ನಡೆದಿದೆ. ಕಾಂಗ್ರೆಸ್ ಪಕ್ಷದ ಯುವ ಮುಖಂಡ ಗೋವಿಂದ ಬಳ್ಳಾರಿ ಎಂಬುವವರು ಮತಗಟ್ಟೆ ಮುಂದೆ ನಿಂತುಕೊಂಡು ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮತ್ತು ಬೇರೆ ವ್ಯಕ್ತಿಗಳಿಗೆ ಮತಗಟ್ಟೆಯಿಂದ ದೂರು ಕಳಿಸುವದನ್ನು ಮಾಡುತ್ತಿದ್ದರಂತೆ. ಈ ವಿಚಾರವಾಗಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಪಕ್ಷದ ಮುಖಂಡ ಅಶೋಕ ಲಿಂಬಾವಳಿ ಅವರ ನೇತೃತ್ವದಲ್ಲಿ ವಿರೋಧಿಸಲು ಮುಂದಾದ ಸಮಯದಲ್ಲಿ ಮಾತಿನ ಚಕಮಕಿ ನಡೆದು ಗಲಾಟೆಗೆ ನಡೆದಿದೆ ಎನ್ನಲಾಗಿದೆ.
ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಮಧ್ಯಪ್ರವೇಶಿಸಿದ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ ಗುಂಪನ್ನ ಚದುರಿಸಿದ್ದಾರೆ. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ಸದ್ಯ ಪರಿಸ್ಥಿತಿ ತಿಳಿಯಾಗಿದ್ದು, ಮತದಾನ ಶಾಂತಿಯುವವಾಗಿ ನಡೆಯಿತು.