ಹುಬ್ಬಳ್ಳಿ : ಬರ ನಿರ್ವಹಣೆ ವಿಷಯದಲ್ಲಿ ಏನಾದರೂ ಸಮಸ್ಯೆಗಳಿದ್ದರೆ ನನ್ನ ಗಮನಕ್ಕೆ ತನ್ನಿ, ಸೂಕ್ತ ಕ್ರಮ ತೆಗೆದುಕೊಳ್ಳಲು ನಾವು ಹಿಂದೆ ಬಿದ್ದಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಬರ ನಿರ್ವಹಣೆ ವಿಷಯದಲ್ಲಿ ನೀತಿ ಸಂಹಿತೆ ಬದಿಗೊತ್ತಿ ನಿರ್ಧಾರ ತೆಗೆದುಕೊಂಡಿದ್ದೇನೆ: ಹೆಚ್ಡಿಕೆ - kannada news
ನೀತಿ ಸಂಹಿತೆಗಳಿದ್ದರೂ ಬರ ನಿರ್ವಹಣೆಯಲ್ಲಿ ಯಾವುದೇ ಸರ್ಕಾರ ತೆಗೆದುಕೊಳ್ಳದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸಿ.ಎಂ ಹೆಚ್.ಡಿ.ಕೆ ಹೇಳಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ
ನಗರದಲ್ಲಿಂದು ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿ, ನೀತಿ ಸಂಹಿತೆಗಳಿದ್ದರೂ ಹಲವು ನಿರ್ಧಾರ ತೆಗೆದುಕೊಂಡಿದ್ದೇವೆ. ನಾಡಿದ್ದು ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಇಟ್ಟುಕೊಂಡಿದ್ದೇನೆ. ಬರ ನಿರ್ವಹಣೆಯಲ್ಲಿ ಯಾವುದೇ ಸರ್ಕಾರ ತೆಗೆದುಕೊಳ್ಳದ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಮಾಹಿತಿ ನೀಡಿದರು.
ಉಪ ಚುನಾವಣೆ ಹಿನ್ನಲೆ ಕುಂದಗೋಳ ಹಾಗೂ ವರೂರಿನಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಕುಸುಮ ಶಿವಳ್ಳಿ ಪರ ಸಿಎಂ ಮತಯಾಚನೆ ಮಾಡಲಿದ್ದಾರೆ.