ಕರ್ನಾಟಕ

karnataka

By

Published : May 17, 2019, 11:38 PM IST

ETV Bharat / elections

ಸಕ್ಕರೆ ನಾಡಿನಲ್ಲಿ ಖಾಕಿ ಕಟ್ಟೆಚ್ಚರ: ಮೇ 23ರಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ

ಜಿಲ್ಲಾದ್ಯಂತ ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಸಕ್ಕರೆ ನಾಡಿನಲ್ಲಿ ಖಾಕಿ ಕಟ್ಟೇಚ್ಚರ

ಮಂಡ್ಯ:ಲೋಕಸಭಾ ಫಲಿತಾಂಶದ ವೇಳೆ ಜಿಲ್ಲೆಯಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗುವ ಸಾಧ್ಯತೆಗಳಿವೆ. ಹಾಗಾಗಿ ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕರಿಗಳು ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಸಿ.ಜಾಫರ್ ಈ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ಹೊರಡಿಸಿರುವ ಪತ್ರದಲ್ಲಿ ಕೆಲವೊಂದು ಮಾಹಿತಿಯನ್ನು ಉಲ್ಲೇಖ ಮಾಡಿದ್ದು, ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಬೇಕಾಗಿದೆ.

ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ

ತಮ್ಮ ನಿಷೇಧಾಜ್ಞೆ ಪತ್ರದಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಕಡೆಯವರು ಜಿಲ್ಲೆಯಲ್ಲಿ ಅಶಾಂತಿ ಮೂಡಿಸುವ, ಹಲ್ಲೆ ಮಾಡುವ, ಮನೆಗಳ ಮೇಲೆ ಕಲ್ಲು‌ ತೂರುವ ಹಾಗೂ ಬೆಂಕಿ ಹಚ್ಚುವ ಸಾಧ್ಯತೆ ಇದೆ ಎಂದು ಉಲ್ಲೇಖ ಮಾಡಲಾಗಿದೆ. ಹೀಗಾಗಿ ಜಿಲ್ಲಾದ್ಯಂತ ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ಮೇ 23ರ ಬೆಳಗ್ಗೆ 6 ಗಂಟೆಯಿಂದ 24ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿ

ತಮ್ಮ ಆದೇಶದ ಪ್ರತಿಯಲ್ಲಿ ಈ ರೀತಿಯ ಉಲ್ಲೇಖ ಮಾಡಲಾಗಿದೆ. ಹೀಗಾಗಿ ಅಂದು ಸಭೆ ಸೇರುವ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.

ABOUT THE AUTHOR

...view details