ಮೈಸೂರು: ಕಾಂಗ್ರೆಸ್ ಅಭ್ಯರ್ಥಿ ವಿಜಯ್ ಶಂಕರ್ ವಿರುದ್ಧ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ 1 ಲಕ್ಷ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರತಾಪ್ ಸಿಂಹ ತಮ್ಮ ಗೆಲುವಿಗೆ ಕಾರಣರಾದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಗೆಲುವಿಗೆ ಕಾರಣರಾದ ಕಾರ್ಯಕರ್ತರಿಗೆ ಧನ್ಯವಾದ ಹೇಳಿದ ಪ್ರತಾಪ್ ಸಿಂಹ - undefined
ಎರಡನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ತಮ್ಮ ಗೆಲುವಿಗೆ ಕಾರಣರಾದ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಈ ಬಗ್ಗೆ ಈಟಿವಿ ಭಾರತ್ ಜೊತೆ ಪ್ರತಾಪ್ ಸಿಂಹ ತಮ್ಮ ಸಂತೋಷ ಹಂಚಿಕೊಂಡರು. ಈ ಗೆಲುವನ್ನು ಮೈಸೂರು, ಕೊಡಗು ಸೇರಿ ನನ್ನ ಎರಡೂ ಜಿಲ್ಲೆಯ ಜನರಿಗೆ ಅರ್ಪಿಸುತ್ತೇನೆ. ನನ್ನ ಗೆಲುವಿಗೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಜೊತೆಗೆ ಎರಡನೇ ಬಾರಿ ಸಂಸದನಾಗಿ ಆಯ್ಕೆ ಆಗಲು ಕಾರಣರಾದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜನರ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಇನ್ನು 5 ವರ್ಷಗಳಲ್ಲಿ ನಿಮ್ಮ ಋಣ ತೀರಿಸುತ್ತೇನೆ.
2014ರಲ್ಲಿ ಮೋದಿ ಅಲೆ ಇತ್ತು. 2019ರಲ್ಲಿ ಮೋದಿ ಸುನಾಮಿ ಎದ್ದಿದೆ. ಜನರ ಪ್ರೀತಿಯನ್ನು ಉಳಿಸಿಕೊಳ್ಳುವಲ್ಲಿ ಮೋದಿ ಯಶಸ್ವಿಯಾಗಿದ್ದಾರೆ. ಅವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರಿಂದಲೇ ಇಂದು ಇಷ್ಟು ಸೀಟುಗಳನ್ನು ಗೆಲ್ಲಲು ಸಾಧ್ಯವಾಯಿತು. ಮೈಸೂರು ರಾಜ-ಮಹಾರಾಜರು ಆಳಿದ ಜಾಗ. ಇಲ್ಲಿನ ಸಂಸದನಾಗಿ ಆಯ್ಕೆ ಆಗಿರುವುದು ನನ್ನ ಪುಣ್ಯ. ಈ ಐದು ವರ್ಷಗಳಲ್ಲಿ ನಾನು ಜನರಿಗಾಗಿ ಸೇವೆ ಸಲ್ಲಿಸುತ್ತೇನೆ. ಜನರ ಹಾಗೂ ಮೋದಿ ಅವರ ನಡುವೆ ಒಳ್ಳೆಯ ಮೈತ್ರಿ ಇದೆ. ಇದರ ಮುಂದೆ ಬೇರಾವ ಮೈತ್ರಿ ಮಾಡಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.