ಹುಬ್ಬಳ್ಳಿ :ನಗರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿಶ್ ಶಾ ಭೇಟಿ ನೀಡಿ, ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದರು. ಉತ್ತರ ಕರ್ನಾಟಕ ಭಾಗದ ಪ್ರಮುಖ ಮುಖಂಡರ ಜೊತೆ ಚರ್ಚೆ ನಡೆಸಿದ್ದಾರೆ.
ರಾಜ್ಯ ಬಿಜೆಪಿಗೆ 'ಶಾ' ಬಲ... ಉತ್ತರ ಕರ್ನಾಟಕ ಮುಖಂಡರ ಜೊತೆ ಚರ್ಚೆ - kannada news
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿಶ್ ಶಾ ಹುಬ್ಬಳ್ಳಿಗೆ ಭೇಟಿ ನೀಡಿದ್ದು, ಉತ್ತರ ಕರ್ನಾಟಕ ಮುಖಂಡರ ಜೊತೆ ಚರ್ಚೆ ನಡೆಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿಶ್ ಶಾ ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ
ನಿನ್ನೆ ತಡರಾತ್ರಿ ಹುಬ್ಬಳ್ಳಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿಶ್ ಶಾ ಖಾಸಗಿ ಹೋಟೆಲ್ನಲ್ಲಿ ವಾಸ್ತವ್ಯ ಹೂಡಿದ್ದು, ಉತ್ತರ ಕರ್ನಾಟಕ ಭಾಗದ ಮುಖಂಡರ ಜೊತೆ ಚರ್ಚೆ ನಡೆಸಿ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ, ಎಂಎಲ್ಸಿ ಪ್ರದೀಪ್ ಶೆಟ್ಟರ್, ಶಾಸಕರಾದ ಅರವಿಂದ ಬೆಲ್ಲದ ಸೇರಿದಂತೆ ಉತ್ತರ ಕರ್ನಾಟಕದ ಹಲವು ಮುಖಂಡರ ಜೊತೆ ಮಾತುಕತೆ ನಡೆಸಿ, ರಾಜ್ಯದ ಸ್ಥಿತಿಗತಿಯ ಬಗ್ಗೆ ಅಮಿತ್ ಶಾ ಮಾಹಿತಿ ಪಡೆದುಕೊಂಡಿದ್ದಾರೆ.