ಕರ್ನಾಟಕ

karnataka

ETV Bharat / elections

ಸಮಯ ಬಂದಾಗ ಸಿದ್ದರಾಮಯ್ಯ ಸಿಎಂ ಆಗ್ತಾರೆ : ಶಾಸಕ ಕೆ.ವೈ. ನಂಜೇಗೌಡ - Kannada news

ಸಮಯ ಸಂದರ್ಭ ಬಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ, ಅವರಿಗೆ ಮುಖ್ಯಮಂತ್ರಿಗಳಾಗುವ ಎಲ್ಲಾ ಅರ್ಹತೆಗಳೂ ಇವೆ ಎಂದು ಶಾಸಕ ಕೆ.ವೈ. ನಂಜೇಗೌಡ ಹೇಳಿದ್ದಾರೆ.

ಶಾಸಕ ಕೆ.ವೈ. ನಂಜೇಗೌಡ

By

Published : May 13, 2019, 8:51 PM IST

ಕೋಲಾರ :ಮಾಜಿ ಸಿಎಂ ಸಿದ್ದರಾಮಯ್ಯ ಅವರೆ ಕುಮಾರಸ್ವಾಮಿ ಅವರನ್ನ ಮುಖ್ಯಮಂತ್ರಿಗಳನ್ನಾಗಿ ಮಾಡಿದ್ದಾರೆ, ಹೀಗಿರುವಾಗ ಮತ್ತೊಬ್ಬ ಮುಖ್ಯಮಂತ್ರಿ ಮಾತೆಲ್ಲಿ ಎಂದು ಕೋಲಾರದಲ್ಲಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ.

ಮಾಜಿ ಸಿಎಂ.ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಶಕ್ತಿಯೊಂದಿಗೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಮುಖ್ಯಮಂತ್ರಿಗಳಾಗಬೇಕಾದರೆ ಕಾಂಗ್ರೆಸ್ ಪಕ್ಷ ಸಹಕಾರ ನೀಡಿದ್ದು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದರು.

ಶಾಸಕ ಕೆ.ವೈ. ನಂಜೇಗೌಡ

ಅಲ್ಲದೆ ನಾನೊಬ್ಬ ಕಾಂಗ್ರೆಸ್ ಎಂ.ಎಲ್.ಎ ಆಗಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ ಎನ್ನುವುದಕ್ಕೆ ಸಾಧ್ಯವೇ? ಎಂದು ಪ್ರಶ್ನಿಸಿದ ಅವರು, ಸಮಯ ಸಂದರ್ಭ ಬಂದಾಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ, ಅವರಿಗೆ ಮುಖ್ಯಮಂತ್ರಿಗಳಾಗುವ ಎಲ್ಲಾ ಅರ್ಹತೆಗಳೂ ಇವೆ ಎಂದರು.

ಇದೇ ರೀತಿ ಉಳಿದ ಶಾಸಕರು ಅವಕಾಶ ಸಿಕ್ಕಾಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳಿದ್ದಾರೆಯೇ ಹೊರತು, ಕುಮಾರಸ್ವಾಮಿ ಅವರನ್ನ ಕೆಳಗಿಳಿಸಿ ಮುಖ್ಯಮಂತ್ರಿಗಳಾಗುತ್ತಾರೆ ಎಂದು ಹೇಳಿಲ್ಲಾ ಎಂದು ಸಮರ್ಥಿಸಿಕೊಂಡರು.

ABOUT THE AUTHOR

...view details