ಬೆಂಗಳೂರು:ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಲೊಕಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಮೈತ್ರಿ ಸರ್ಕಾರದ ಎಲ್ಲಾ ಲೆಕ್ಕಾಚಾರಗಳನ್ಜು ತಲೆಕೆಳಗಾಗಿ ಮಾಡಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು 80000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.
ಮೈತ್ರಿ ಚಕ್ರವ್ಯೂಹ ಬೇಧಿಸಿದ ಸುಮಲತಾ... ಜನತೆಗೆ ಧನ್ಯವಾದ ಹೇಳಿದ ರೆಬೆಲ್ ಪತ್ನಿ - kananda news
ಮಂಡ್ಯದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ ಸುಮಲತಾ ಅಂಬರೀಶ್.

ಸುಮಲತಾ ಅಂಬರೀಶ್
ಅಲ್ಲದೆ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭೆಗೆ ಆಯ್ಕೆಯಾದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಇನ್ನು ಮಂಡ್ಯದಲ್ಲಿ ಸಿಕ್ಕಿದ ಅಭೂತಪೂರ್ವ ಗೆಲುವಿಗೆ ಸುಮಲತಾ ಅಂಬರೀಶ್ ಮಂಡ್ಯದ ಜನತೆಗೆ ಹಾಗೂ ಇಡೀ ರಾಜ್ಯದ ಜನರಿಗೆ ಧನ್ಯವಾದ ತಿಳಿಸಿದ್ದಾರೆ.
ಸುಮಲತಾ ಅಂಬರೀಶ್ ಅವರ ಫೇಸ್ಬುಕ್ ಪೇಜ್ನಲ್ಲಿ ಯಾರು ಯಾರಿಗೆ ಅಭಿನಂದನೆ ಹೇಳಲಿ. ನನ್ನ ಗೆಲುವಿಗೆ ಮಂಡ್ಯದ ಜನತೆ ಮಾತ್ರವಲ್ಲದೆ ಇಡೀ ರಾಜ್ಯದ ಜನತೆ ಆಶೀರ್ವದಿಸಿದ್ದಾರೆ ಎಂದು ಬರೆದು ಪೋಸ್ಟ್ ಮಾಡುವ ಮೂಲಕ ರಾಜ್ಯದ ಜನತೆಗೆ ಧನ್ಯವಾದ ತಿಳಿಸಿದ್ದಾರೆ.