ಕರ್ನಾಟಕ

karnataka

ETV Bharat / elections

ದೇಶದ್ರೋಹ ಕಾಯ್ದೆ ದುರ್ಬಳಕೆ: ಸೈಯದ್ ನಾಸೀರ್ - ಚುನಾವಣಾ ಪ್ರಣಾಳಿಕೆ

ರಾಷ್ಟ್ರದಲ್ಲಿ ಕಾಯ್ದೆ ದುರ್ಬಳಕೆ ಹೆಚ್ಚಾಗುತ್ತಿದೆ ಹೀಗಾಗಿ ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದೇವೆ ಇದಕ್ಕೆ ಬಿಜೆಪಿ ಅಪಪ್ರಚಾರ ಮಾಡುತ್ತಿದೆ, ಎಂದು ನಾಸೀರ್ ಹುಸೇನ್ ಹೇಳಿಕೆ ನೀಡಿದ್ದಾರೆ.

ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್‌

By

Published : Apr 6, 2019, 8:50 AM IST

ಕಲಬುರಗಿ: ದೇಶದ್ರೋಹ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ಬಿಜೆಪಿ ಜನತೆಯಲ್ಲಿ ಗೊಂದಲ ಸೃಷ್ಟಿಸಿ, ಅದರ ಲಾಭ ಪಡೆದುಕೊಳ್ಳುಲು ಹವಣಿಸುತ್ತಿದೆ ಎಂದು ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್‌ ಆರೋಪಿಸಿದ್ದಾರೆ.

ರಾಜ್ಯಸಭಾ ಸದಸ್ಯ ಸೈಯದ್ ನಾಸೀರ್ ಹುಸೇನ್‌

ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಕಾಯ್ದೆ ದುರ್ಬಳಕೆ ಹೆಚ್ಚಾಗುತ್ತಿದೆ. ಹೀಗಾಗಿ ಅಗತ್ಯವಿದ್ದಲ್ಲಿ ತಿದ್ದುಪಡಿ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದೇವೆ. ಅದನ್ನು ತಿರುಚಿ ದೇಶದ್ರೋಹ ಕಾಯ್ದೆಯನ್ನೇ ರದ್ದುಗೋಳಿಸುತ್ತಿದ್ದಾರೆ ಎಂದು ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಕಾಂಗ್ರೆಸ್ಸ್ ಅಭಿವೃದ್ಧಿ ಪರವಾಗಿದ್ದರೆ, ಬಿಜೆಪಿ ಅಪಪ್ರಚಾರದ ಪರವಾಗಿದೆ. ಹೀಗೆ ಅಪಪ್ರಚಾರದಲ್ಲಿ ತೊಡಗಿರುವ ಬಿಜೆಪಿಗೆ ಜನತೆಯೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನಾಸಿರ್ ಹುಸೇನ್ ಅಭಿಪ್ರಾಯಪಟ್ಟರು.

ABOUT THE AUTHOR

...view details