ಹುಬ್ಬಳ್ಳಿ : ಸಂಘಟನೆಯ ಮೂಲಕವೇ ಈ ಸಾರಿ ಕುಂದಗೋಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಇವತ್ತು ಬಿಜೆಪಿ ಪಕ್ಷದಿಂದ ಎಸ್.ಐ ಚಿಕ್ಕನಗೌಡರ ನಾಮಪತ್ರ ಸಲ್ಲಿಸಿದ್ದಾರೆ. ಚಿಕ್ಕನಗೌಡರಿಗೆ ಸಾಥ್ ನೀಡಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆ್ಟ್ಟರ್, ಸಂಘಟನೆಯ ಮೂಲಕ ಕುಂದಗೋಳದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಂದಗೋಳ ವಿಧಾನಸಭೆ ಕ್ಷೇತ್ರ ಚುನಾವಣೆ ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ ಚಿಕ್ಕನಗೌಡರ ನಾಮಪತ್ರ ಸಲ್ಲಿಸಿ ಮಾತನಾಡಿ, ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲವು ಸಾಧಿಸಲಿದ್ದಾರೆ. 23 ರ ಫಲಿತಾಂಶದ ನಂತರ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆ ಆಗಲಿದೆ. ರಾಜ್ಯ ರಾಜಕಾರಣದಲ್ಲಿ ಈ ಚುನಾವಣೆ ದಿಕ್ಸೂಚಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯದಲ್ಲಿ 23ರ ನಂತರ ಬಿಜೆಪಿ ಆಪರೇಷನ್ ನಡೆಯುವದಿಲ್ಲ, ಏನಿದ್ದರೂ ಅದು ಸಿದ್ದರಾಮಯ್ಯ ಆಪರೇಷನ್ ನಡೆಯಲಿದೆ. ಇದಕ್ಕೆ ಮೂನ್ಸೂಚನೆ ಸಿಕ್ಕಿದೆ, ಕಾದು ನೋಡಿ ಎಂದಷ್ಟೇ ಚುಟುಕಾಗಿ ಹೇಳಿದರು.