ಕರ್ನಾಟಕ

karnataka

ETV Bharat / elections

ಇಂದು ಮೈಸೂರಿಗೆ ಎಐಸಿಸಿ ಅಧ್ಯಕ್ಷ... ಮೋದಿ ವಾಗ್ದಾಳಿಗೆ ಟಕ್ಕರ್ ಕೊಡ್ತಾರಾ ರಾಗಾ? - ಮದ್ಯ ನಿಷೇಧ

ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಲು ಇಂದು ಸಾಯಾಂಕಾಲ ಮೈಸೂರು ಜಿಲ್ಲೆಗೆ ಆಗಮಿಸಲಿದ್ದಾರೆ.

rg

By

Published : Apr 13, 2019, 5:46 AM IST

ಮೈಸೂರು: ಹಳೆ ಮೈಸೂರು ಭಾಗದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರು ಸಾಂಸ್ಕೃತಿಕ ನಗರಿಗೆ ಮೈಸೂರಿಗೆ ನಾಳೆ ಆಗಮಿಸುತ್ತಿದ್ದಾರೆ.

ಮೈಸೂರಿನ ಕೆ.ಆರ್.ನಗರ ತಾಲ್ಲೂಕಿನ ಮೈದಾನದಲ್ಲಿ ಮೈತ್ರಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಲಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಅವರು ಕಾಂಗ್ರೆಸ್-ಜೆಡಿಎಸ್ ವಿರುದ್ಧ ವಾಗ್ಬಾಣಗಳನ್ನು ಬಿಟ್ಟಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಅವರು ಹೇಗೆ ಟಕ್ಕರ್ ನೀಡಲಿದ್ದಾರೆ ಎಂಬುವುದು ನೋಡಬೇಕಿದೆ.

ಕೆಅರ್.ನಗರದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ರಾಹುಲ್​ಗಾಂಧಿ ಸಂಜೆ 5.30ಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಮದ್ಯ ನಿಷೇಧ:

ಕೆ.ಆರ್.ನಗರದಲ್ಲಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರು ಏ.13 ರಂದು ಬಹಿರಂಗ ಸಭೆಯಲ್ಲಿ ಭಾಗವಹಿಸಲಿರುವುದರಿಂದ ಕೆ.ಆರ್.ನಗರ ತಾಲ್ಲೂಕಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನಚ್ಚರಿಕಾ ಕ್ರಮವಾಗಿ ಕರ್ನಾಟಕ ಅಬಕಾರಿ ಸನ್ನದುಗಳು 1967ರ ನಿಯಮ 21ರಡಿ ಇಂದು ಬೆಳಿಗ್ಗೆ 6 ರಿಂದ ರಾತ್ರಿ 12ರವರೆಗೆ ಕೆ.ಆರ್.ನಗರ ತಾಲ್ಲೂಕಿನಾದ್ಯಂತ ಬರುವ ಎಲ್ಲಾ ಮಧ್ಯಂಗಡಿಗಳನ್ನು ಮುಚ್ಚುವಂತೆ, ಮಧ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅಭಿರಾಮ್ ಜಿ. ಶಂಕರ್ ಆದೇಶ ಹೊರಡಿಸಿದ್ದಾರೆ.

ABOUT THE AUTHOR

...view details