ಬೆಂಗಳೂರು: ಮಂಡ್ಯದ ಮೈತ್ರಿ ಅಭ್ಯರ್ಥಿ/ ಪುತ್ರ ನಿಖಿಲ್ ಗೆಲುವಿಗಾಗಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕುಟುಂಬದ ಟೆಂಪಲ್ ರನ್ ಪೂಜೆ ಮುಂದುವರೆದಿದೆ. ನಿಖಿಲ್ ಗೆಲ್ಲಿಸುವಂತೆ ದೇವರ ಮೊರೆ ಹೋಗಿರುವ ಹೆಚ್ಡಿಕೆ, ಇಂದು ತಮಿಳುನಾಡಿನ ಮುರುಗನ್ ಎಂಬ ದೇವಾಲಯದಲ್ಲಿ ವಿಶೇಷ ಪೂಜೆ ಮಾಡಿಸಲಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಎರಡು ಹಂತದ ಲೋಕಸಭಾ ಚುನಾವಣೆ ವೋಟಿಂಗ್ ಮುಕ್ತಾಯಗೊಂಡಿದ್ದು, ಸಿಎಂ ರಿಲ್ಯಾಕ್ಸ್ ಮೂಡ್ಗೆ ಜಾರಿದ್ದಾರೆ. ಮೊನ್ನೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸೇರಿದಂತೆ ಸಿಎಂ ಇಡೀ ಕುಟಂಬವೇ ಶೃಂಗೇರಿ ಸಮೀಪದ ಹಳ್ಳಿಯೊಂದಕ್ಕೆ ತೆರಳಿತ್ತು. ಅಮವಾಸ್ಯೆ ಪ್ರಯುಕ್ತ ಅಲ್ಲಿನ ಉಮಾ ಮಹೇಶ್ವರಿ ದೇವಾಲಯದಲ್ಲಿ ಹೋಮ ಮುಗಿಸಿದ ಕುಟುಂಬ ಬೆಂಗಳೂರಿಗೆ ವಾಪಸ್ಸಾಗಿತ್ತು. ಈ ಹಿಂದೆಯೂ ಶೃಂಗೇರಿ ಮಠಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಪೂಜೆ ಸಲ್ಲಿಸಿತ್ತು. ಇದೀಗ ತಮಿಳುನಾಡಿನಲ್ಲಿ ಹೆಚ್ಡಿಕೆ ವಿಶೇಷ ಪೂಜೆ ಸಲ್ಲಿಕೆ ಮಾಡಲಿದ್ದಾರೆ.