ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಪಕ್ಕಾ ಆಗಿದೆ. ವಾರಾಣಸಿಯಲ್ಲಿ ಮೋದಿ 1.27 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಹುತೇಕ ಇಲ್ಲಿ ಮೋದಿಗೆ ಜಯ ಖಚಿತವಾದಂತಾಗಿದೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜರಾತಿನ ಗಾಂಧಿನಗರ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರುವ ತವಕದಲ್ಲಿದ್ದಾರೆ. ಮತ ಎಣೆಕೆ ಪ್ರಾರಂಭದಿಂದಲೂ ಸುಮಾರು 3.5 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಕೇರಳದ ವೈನಾಡಿನಲ್ಲಿ ಗೆಲುವಿನ ಸನೀಹದಲ್ಲಿದ್ದಾರೆ. ಅವರ ಮತ್ತೊಂದು ಕ್ಷೇತ್ರ ಉತ್ತರ ಪ್ರದೇಶದ ಅಮೇಥಿಯಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಭಾರಿ ಹಿನ್ನೆಡೆ ಪಡೆದುಕೊಂಡಿದ್ದಾರೆ.
ಮಧ್ಯಪ್ರದೇಶದ ಭೂಪಾಲ್ನಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಗೆಲ್ಲುವ ಸಾಧ್ಯತೆಯಿದೆ. ಮೊದಲ ಸುತ್ತಿನಿಂದಲೂ ಕಾಂಗ್ರೆಸ್ನ ದಿಗ್ವಿಜಯ್ ಸಿಂಗ್ ಹಿಂದಿಕ್ಕಿ, ಮುನ್ನಡೆಯಲ್ಲಿದ್ದಾರೆ.