ಕರ್ನಾಟಕ

karnataka

ETV Bharat / entertainment

ಬಿಟೌನ್‌ ಸೂಪರ್ ಸ್ಟಾರ್ ಜತೆ ತೆರೆ ಹಂಚಿಕೊಳ್ಳಲು ರೆಡಿಯಾದ ಜೂ.ಮೆಗಾಸ್ಟಾರ್ - ಜ್ಯೂ ಮೆಗಾಸ್ಟಾರ್

ಆರ್‌ಆರ್‌ಆರ್ ಸಿನಿಮಾದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚ್ತಿರುವ ರಾಮ್ ಚರಣ್ ಈಗ ಬಾಲಿವುಡ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ.

Ram Charan joins the cast of Salman's 'Kabhi Eid Kabhi Diwali'
ಬಿಟೌನ್‌ ಸೂಪರ್ ಸ್ಟಾರ್ ಜತೆ ತೆರೆ ಹಂಚಿಕೊಳ್ಳಲು ರೆಡಿಯಾದ ಜ್ಯೂ.ಮೆಗಾಸ್ಟಾರ್

By

Published : Jun 22, 2022, 7:09 AM IST

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಜೊತೆ ರಾಮ್ ಚರಣ್ ತೆರೆಹಂಚಿಕೊಳ್ಳುತ್ತಿದ್ದಾರೆ. ಸಲ್ಮಾನ್ ಖಾನ್ ನಟನೆಯ 'ಕಭಿ ಈದ್ ಕಭಿ ದಿವಾಲಿ' ಸಿನಿಮಾದ ವಿಶೇಷ ಹಾಡಿನಲ್ಲಿ ರಾಮ್ ಚರಣ್ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗ್ತಿದೆ.

ಟಾಲಿವುಡ್ ಸ್ಟಾರ್ ರಾಮ್ ಚರಣ್ ಸದ್ಯ ತಮಿಳಿನ ಖ್ಯಾತ ನಿರ್ದೇಶಕ ಶಂಕರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆರ್‌ಆರ್‌ಆರ್ ಸಿನಿಮಾದ ಸಕ್ಸಸ್ ಖುಷಿಯಲ್ಲಿರುವ ರಾಮ್ ಚರಣ್ ಈ ಸಿನಿಮಾದ ದೊಡ್ಡ ಮಟ್ಟದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಶಂಕರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಇನ್ನೂ ಹೆಸರಿಡದ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಈ ನಡುವೆ ತೆಲುಗು ಸ್ಟಾರ್ ಇದೀಗ ಬಾಲಿವುಡ್‌ಗೆ ಹಾರಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ಬಿಟೌನ್‌ ಸೂಪರ್ ಸ್ಟಾರ್ ಜತೆ ತೆರೆ ಹಂಚಿಕೊಳ್ಳಲು ರೆಡಿಯಾದ ಜ್ಯೂ.ಮೆಗಾಸ್ಟಾರ್

ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಜೊತೆ ರಾಮ್ ಚರಣ್ ತೆರೆ ಹಂಚಿಕೊಳ್ಳುತ್ತಿದ್ದಾರೆ. ಸಲ್ಮಾನ್ ಖಾನ್ ಸದ್ಯ ಕಭಿ ಈದ್ ಕಭಿ ದಿವಾಲಿ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾದ ವಿಶೇಷ ಹಾಡಿನಲ್ಲಿ ರಾಮ್ ಚರಣ್ ಕಾಣಿಸಿಕೊಳ್ಳುತ್ತಿದ್ದಾರೆ. ಸಲ್ಮಾನ್ ಖಾನ್ ಸದ್ಯ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡುತ್ತಿದ್ದಾರೆ. ಈ ವೇಳೆ ರಾಮ್ ಚರಣ್ ಅವರನ್ನು ಭೇಟಿಯಾಗಿದ್ದಾರೆ. ಆಗ ತನ್ನ ಸಿನಿಮಾದಲ್ಲಿ ನಟಿಸುವಂತೆ ಕೇಳಿಕೊಂಡಿದ್ದಾರೆ. ಸಲ್ಮಾನ್ ಖಾನ್ ಮಾತಿಗೆ ರಾಮ್ ಚರಣ್ ತಕ್ಷಣ ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಭಿ ಈದ್ ಕಭಿ ದಿವಾಲಿ ಸಿನಿಮಾದ ಈ ವಿಶೇಷ ಹಾಡಿನ ಚಿತ್ರೀಕರಣಕ್ಕಾಗಿ ಈಗಾಗಲೇ ಅದ್ದೂರಿ ಸೆಟ್ ನಿರ್ಮಾಣವಾಗುತ್ತಿದ್ದು, ಬಹು ಕೋಟಿ ವೆಚ್ಚದಲ್ಲಿ ಈ ಹಾಡನ್ನು ಸೆರೆಹಿಡಿಯಲಾಗುತ್ತಿದೆ. ಈ ಹಾಡಿನಲ್ಲಿ ರಾಮ್ ಚರಣ್ ಕೂಡ ಹೆಜ್ಜೆ ಹಾಕುತ್ತಿದ್ದಾರೆ. ರಾಮ್ ಚರಣ್ ಜೊತೆ ತೆಲುಗಿನ ಮತ್ತೋರ್ವ ಸ್ಟಾರ್ ನಟ ವೆಂಕಟೇಶ್ ದಗ್ಗುಬಾಟಿ ಕೂಡ ಹೆಜ್ಜೆ ಹಾಕುತ್ತಿದ್ದಾರಂತೆ.

ಈ ಸಿನಿಮಾದಲ್ಲಿ ಸಲ್ಮಾನ್ ಖಾನ್‌ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಕಾಣಿಸಿಕೊಂಡಿದ್ದಾರೆ. ಇನ್ನು ಶೇಹನಾಜ್ ಗಿಲ್, ರಾಘವ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈ ಸಿನಿಮಾ ಸಲ್ಮಾನ್ ಖಾನ್ ನಿರ್ಮಾಣದಲ್ಲಿ ಮೂಡಿಬರುತ್ತಿದೆ. ಡಿಸೆಂಬರ್ 30, 2022ರಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ:ಸಲ್ಮಾನ್ ಖಾನ್ ಅಭಿನಯದ ‘ಕಭಿ ಈದ್ ಕಭಿ ದಿವಾಲಿ‘ ಸಿನಿಮಾದ ರಿಲೀಸ್​​ ಡೇಟ್​​ ಅನೌನ್ಸ್​

ABOUT THE AUTHOR

...view details