ಹೈದರಾಬಾದ್: ಖ್ಯಾತ ನಟ ಮಹೇಶ್ ಬಾಬು ಅವರ ತಾಯಿ ಇಹಲೋಕ ತ್ಯಜಿಸಿದ್ದಾರೆ. ಸೂಪರ್ ಸ್ಟಾರ್ ಕೃಷ್ಣ ಅವರ ಪತ್ನಿ ಹಾಗೂ ಮಹೇಶ್ ಅವರ ತಾಯಿ ಇಂದಿರಾ ದೇವಿ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಕೃಷ್ಣ-ಇಂದಿರಾದೇವಿಗೆ ರಮೇಶ್ ಬಾಬು ಮತ್ತು ಮಹೇಶ್ ಬಾಬು ಇಬ್ಬರು ಗಂಡು ಮಕ್ಕಳು ಹಾಗೂ ಪದ್ಮಾವತಿ, ಮಂಜುಳಾ ಮತ್ತು ಪ್ರಿಯದರ್ಶಿನಿ ಮೂವರು ಹೆಣ್ಮಕ್ಕಳು ಇದ್ದಾರೆ. ಕೆಲ ತಿಂಗಳ ಹಿಂದೆ ರಮೇಶ್ ಬಾಬು ಕೂಡ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದೀಗ ಇಂದಿರಾದೇವಿ ನಿಧನದಿಂದ ಮಹೇಶ್ ಕುಟುಂಬ ತೀವ್ರ ದುಃಖದಲ್ಲಿದೆ. ಅವರ ನಿಧನಕ್ಕೆ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.