ಕರ್ನಾಟಕ

karnataka

ETV Bharat / entertainment

68ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ: ಕನ್ನಡದ ಈ ಮೂರು ಚಿತ್ರಗಳಿಗೆ ಪ್ರಶಸ್ತಿ

ನಿರ್ದೇಶಕ ಪವನ್‌ ಒಡೆಯರ್ ನಿರ್ಮಾಣದ ಡೊಳ್ಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ನೀಡಲಾಯಿತು.

68ನೇ ಸಾಲಿನ ರಾಷ್ಟ್ರ ಪ್ರಶಸ್ತಿ
68ನೇ ಸಾಲಿನ ರಾಷ್ಟ್ರ ಪ್ರಶಸ್ತಿ

By

Published : Sep 30, 2022, 11:03 PM IST

ಬೆಂಗಳೂರು: ಕೇಂದ್ರ ಸರ್ಕಾರ ಕೆಲವು ತಿಂಗಳ ಹಿಂದೆಯಷ್ಟೇ 68ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪಡೆದವರ ಬಗ್ಗೆ ಘೋಷಣೆ ಮಾಡಲಾಗಿತ್ತು. ಇಂದು ದೆಹಲಿಯ ವಿಜ್ಞಾನ​ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ವಿಶಿಷ್ಟ ಕಥಾಹಂದರ ಹೊಂದಿರುವ ಕನ್ನಡದ ಡೊಳ್ಳು ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ತಲೆದಂಡ, ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಸಿನಿಮಾ ವಿಭಾಗದಲ್ಲಿ ಗಿರೀಶ್​ ಕಾಸರವಳ್ಳಿ ನಿರ್ದೇಶನದ ನಾದದ ನವನೀತ ಸಿನಿಮಾಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ತಲೆದಂಡ ಸಿನಿಮಾ

ಭಿನ್ನ ಕಥಾಹಂದರ ಹೊಂದಿರುವ ನಿರ್ದೇಶಕ ಪವನ್‌ ಒಡೆಯರ್ ನಿರ್ಮಾಣದ ಸುನೀಲ್ ಪುರಾಣಿಕ್ ನಿರ್ದೇಶನದ ಡೊಳ್ಳು ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ನೀಡಲಾಯಿತು. ಇದರ ಜೊತೆಗೆ ದಿವಂಗತ ಸಂಚಾರಿ ವಿಜಯ್ ಅಭಿನಯದ ಪರಿಸರ ಕಾಳಜಿ ಹೊಂದಿರುವ ತಲೆದಂಡ ಚಿತ್ರಕ್ಕೆ ಪ್ರಶಸ್ತಿ ನೀಡಲಾಯಿತು. ಇನ್ನು ಸಾಂಸ್ಕೃತಿಕ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ನಾದದ ನವನೀತ ಸಿನಿಮಾಗಳಿಗೆ ಪ್ರಶಸ್ತಿ ವಿತರಿಸಲಾಯಿತು. ‌

ನಿರ್ದೇಶಕ ಗಿರೀಶ್ ಕಾಸರವಳ್ಳಿ

ಇದರ ಜೊತೆಗೆ ಅಜಯ್​ ದೇವಗನ್​ ತಾನಾಜಿ: ದಿ ಅನ್​ಸಂಗ್​ ಹೀರೋ ಹಾಗೂ ಸೂರ್ಯ ಸೂರರೈ ಪೋಟ್ರು ‘ಅತ್ಯುತ್ತಮ ನಟ’ ಪ್ರಶಸ್ತಿ ಹಂಚಿಕೊಂಡಿದ್ದರು. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅಪರ್ಣಾ ಬಾಲಮುರಳಿ ಅವರು ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡರು. ಅಯ್ಯಪ್ಪನುಮ್​ ಕೋಶಿಯುಂ ಚಿತ್ರದಲ್ಲಿನ ಅಭಿನಯಕ್ಕೆ ಬಿಜು ಮೆನನ್​ ಅವರು ‘ಅತ್ಯುತ್ತಮ ಪೋಷಕ ನಟ’ ಪ್ರಶಸ್ತಿಗೆ ಭಾಜನರಾದರು. ತಮಿಳು ನಟಿ ಲಕ್ಷ್ಮೀ ಪ್ರಿಯಾ ಚಂದ್ರಮೌಳಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ ಪ್ರಶಸ್ತಿ ನೀಡಿ ಗೌರವಿಸಲಾಗಿತು.

ಓದಿ:68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ: ಆಶಾ ಪಾರೇಖ್​ಗೆ ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಗೌರವ

ABOUT THE AUTHOR

...view details