ಮುಂಬೈ: ಬಾಲಿವುಡ್ನ ಸೂಪರ್ ಸ್ಟಾರ್ ಅಮೀರ್ ಖಾನ್ ಮತ್ತು ನಿರ್ಮಾಪಕಿ ರೀನಾ ದತ್ತಾ ಅವರ ಪುತ್ರಿ ಆಗಿರುವ ರಂಗಭೂಮಿ ನಿರ್ದೇಶಕಿ ಇರಾ ಖಾನ್ ಶುಕ್ರವಾರ ತಮ್ಮ ಬಹುಕಾಲದ ಸಂಗಾತಿ ನೂಪುರ್ ಶಿಖರೆ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸೆಲೆಬ್ರಿಟಿ ಫಿಟ್ನೆಸ್ ತರಬೇತುದಾರರೊಂದಿಗೆ ಶೀಘ್ರದಲ್ಲೇ ನಿಶ್ಚಿತಾರ್ಥ ಮಾಡಿಕೊಳ್ಳುವುದಾಗಿ ಇರಾ ಖಾನ್ ಇತ್ತೀಚೆಗಷ್ಟೇ ಬಹಿರಂಗಪಡಿಸಿದ್ದರು.
ಶುಕ್ರವಾರ ನಿರೀಕ್ಷೆಯಂತೆ ತಾರಾ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಅಮೀರ್ ಖಾನ್, ಅವರ ಮಾಜಿ ಪತ್ನಿಯರಾದ ರೀನಾ ದತ್ತಾ ಮತ್ತು ಕಿರಣ್ ರಾವ್, ಇಮ್ರಾನ್ ಖಾನ್ ಮತ್ತು ಮನ್ಸೂರ್ ಖಾನ್ ಸೇರಿದಂತೆ ಅವರ ಕುಟುಂಬ ಸದಸ್ಯರು ಭಾಗವಹಿಸಿದ್ದರು.