ಮುಂಬೈ: ಮೇ. 29ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್ ಫೈನಲ್ ಪಂದ್ಯಾವಳಿ ನಡೆಯಲಿದೆ. ಈ ಪಂದ್ಯಾವಳಿಯ ಮೊದಲ ಇನ್ನಿಂಗ್ಸ್ನ ಸೆಕೆಂಡ್ ಸ್ಟ್ರಾಟೆಜಿಕ್ ಟೈಮ್‌ಔಟ್‌ನಲ್ಲಿ, ಬಾಲಿವುಡ್ ನಟ ಅಮೀರ್ ಖಾನ್ ಅವರ ಮುಂಬರುವ ಚಿತ್ರ 'ಲಾಲ್ ಸಿಂಗ್ ಚಡ್ಡಾ' ಟ್ರೈಲರ್ ಅನಾವರಣಗೊಳಿಸಲಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರತಂಡವು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ. ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ಅಮೀರ್ 'ಲಾಲ್ ಸಿಂಗ್ ಚಡ್ಡಾ' ಟ್ರೈಲರ್ ಬಿಡುಗಡೆಯನ್ನು ಮಾಡುವ ಬಗ್ಗೆ ಘೋಷಿಸಿದ್ದಾರೆ. ಮೇ. 29ರಂದು ನಡೆಯಲಿರುವ ಐಪಿಎಲ್ ಕೊನೆಯ ಪಂದ್ಯಾವಳಿಯನ್ನು ಕೋಟ್ಯಂತರ ಭಾರತೀಯರು ಕಾತುರದಿಂದ ನೋಡುತ್ತಾರೆ ಎಂಬುದು ಖಚಿತ.
ಈ ವೇಳೆ, ಸಿನಿಮಾ ಟ್ರೈಲರ್ ಬಿಡುಗಡೆ ಮಾಡಿದರೆ ಅತಿಹೆಚ್ಚು ಜನರನ್ನು ತಲುಪಲು ಸಾಧ್ಯ ಎಂಬುದು ಚಿತ್ರತಂಡದ ಯೋಜನೆಯಾಗಿದೆ. ಹಾಗಾಗಿ ವಿಡಿಯೋದಲ್ಲಿ ಅಮೀರ್ ಖಾನ್ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಮತ್ತು ಡಿಸ್ನಿ+ ಹಾಟ್ಸ್ಟಾರ್ನಲ್ಲಿ ನಾನು ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ.