ರೆಬೆಲ್ ಸ್ಟಾರ್ ದಿ.ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ವಿವಾಹಕ್ಕೆ ಸಿದ್ಧತೆ ಜೋರಾಗೇ ನಡೆಯುತ್ತಿದೆ. ಪ್ರೀತಿಸಿದ ಹುಡುಗಿ, ಫ್ಯಾಷನ್ ಡಿಸೈನರ್ ಅವಿವಾ ಬಿದ್ದಪ್ಪ ಕೈ ಹಿಡಿದು ಗೃಹಸ್ತಾಶ್ರಮಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಅಭಿಷೇಕ್. ಸದ್ಯ ಮದುವೆ ಆಮಂತ್ರಣ ಪತ್ರಿಕೆ ಹಲವು ವಿಶೇಷತೆಗಳಿಂದ ಗಮನ ಸೆಳೆಯುತ್ತಿದೆ.
ಪ್ರಧಾನಿ ಮೋದಿಗೆ ತಲುಪಿದೆ ಇನ್ವಿಟೇಶನ್: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಸೂಪರ್ ಸ್ಟಾರ್ಗಳಾದ ರಜನಿಕಾಂತ್, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಇದೇ ವಿವಾಹ ಪತ್ರಿಕೆಯನ್ನು ಸುಮಲತಾ ಹಾಗೂ ಅಭಿಷೇಕ್ ತಲುಪಿಸಿದ್ದಾರೆ. ಅಭಿಷೇಕ್ ಹಾಗೂ ಅವಿವಾ ಮದುವೆ ಆಮಂತ್ರಣ ಪತ್ರಿಕೆ ಅದ್ಧೂರಿಯಾಗಿದ್ದು, ವಿಶೇಷವಾಗಿ ಸಿದ್ಧಪಡಿಸಲಾಗಿದೆ. ದ್ರಾಕ್ಷಿ, ಗೋಡಂಬಿ ಸೇರಿದಂತೆ ಡ್ರೈ ಫ್ರ್ಯೂಟ್ಸ್ನಿಂದ ಈ ಲಗ್ನಪತ್ರಿಕೆ ರೆಡಿ ಮಾಡಿದ್ದಾರೆ.
ಮೆಹೆಂದಿ, ಸಂಗೀತ್, ಅತಿಥಿಗಳ ಡಿಟೈಲ್ಸ್ ಇಲ್ಲಿದೆ..: ಮದುವೆ ಸಂಭ್ರಮ ಈಗಾಗಲೇ ಆರಂಭ ಆಗಿದೆ. ಎರಡೂ ಮನೆಯಲ್ಲೂ ಸಿದ್ಧತೆಗಳು ಜೋರಾಗಿ ನಡೆಯುತ್ತಿದೆ. ಜೂನ್ 2 ರಿಂದಲೇ ಬೆಂಗಳೂರಿನಲ್ಲಿ ಮದುವೆ ಕಾರ್ಯಕ್ರಮಗಳು ಆರಂಭ ಆಗುತ್ತಿವೆ. ಜೂನ್ 2ರಂದು ಮೆಹಂದಿ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ. ಜೂನ್ 3 ರಂದು ಸಂಗೀತ್ ಕಾರ್ಯಕ್ರಮ ನಡೆಯಲಿದೆ. ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ಎರಡು ತಂಡಗಳಾಗಿ ಈ ಕಾರ್ಯಕ್ರಮಗಳಲ್ಲಿ ಡ್ಯಾನ್ಸ್ ಮಾಡಲಿದ್ದಾರೆ. ಜೂನ್ 4 ರಂದು ಚಪ್ಪರ ಶಾಸ್ತ್ರ ಇರಲಿದೆ. ಜೂನ್ 5ರಂದು ವಿವಾಹ ಮಹೋತ್ಸವ ನಡೆಯಲಿದೆ. ಕೇವಲ ಆತ್ಮೀಯರು ಹಾಗೂ ಕುಟುಂಬಸ್ಥರು ಮಾತ್ರ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.