ನಮ್ ಗಣಿ ಬಿಕಾಂ ಪಾಸ್, ಗಜಾನನ ಅಂಡ್ ಗ್ಯಾಂಗ್ ಸಿನಿಮಾಗಳ ಮೂಲಕ ಸ್ಯಾಂಡಲ್ವುಡ್ನಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಅಭಿಷೇಕ್ ಶೆಟ್ಟಿ. ಗಜಾನನ ಅಂಡ್ ಗ್ಯಾಂಗ್ ನಂತರ ಸದ್ದಿಲ್ಲದೇ ಹೊಸ ಸಿನಿಮಾ ಕೆಲಸದಲ್ಲಿ ಬ್ಯುಸಿಯಾಗಿದ್ದು, ಅಭಿಮಾನಿಗಳಿಗಾಗಿ ಅದರ ಲೇಟೆಸ್ಟ್ ಸುದ್ದಿಯೊಂದು ಹೊರಬಿದ್ದಿದೆ.
ಅಕಿರ, ವಾಸು ನಾನ್ ಪಕ್ಕಾ ಕಮರ್ಶಿಯಲ್ ಹಾಗೂ ರಾಮಾರ್ಜುನ ಸಿನಿಮಾ ಖ್ಯಾತಿಯ ನಟ ಅನೀಶ್ ಅವರ ಮುಂದಿನ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಈ ಹಿಂದಿನ ಸಿನಿಮಾಗಳಲ್ಲಿ ನಿರ್ದೇಶಕ ಅಭಿಷೇಕ್ ಶೆಟ್ಟಿ ಕೆಲಸ ನೋಡಿ ಇಂಪ್ರೆಸ್ ಆಗಿರುವ ಅನೀಶ್ ಅವರು ಅಭಿಷೇಕ್ ಜೊತೆ ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಅಭಿಷೇಕ್ ಶೆಟ್ಟಿ ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು 'ಅಕಿರ' ಸಿನಿಮಾ ಖ್ಯಾತಿಯ ಶ್ರೀಕಾಂತ್ ಪ್ರಸನ್ನ, 'ಗುಳ್ಟು' ಸಿನಿಮಾ ಖ್ಯಾತಿಯ ಪ್ರಶಾಂತ್ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಅಭಿಷೇಕ್ ಶೆಟ್ಟಿ, ರೊಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಅನೀಶ್ ಹೊಸ ಅವತಾರದಲ್ಲಿ ಕಾಣಸಿಗಲಿದ್ದಾರೆ. ಈವರೆಗೆ ಅನೀಶ್ ಮಾಡಿರುವ ಸಿನಿಮಾಗಳಿಗಿಂತ ಈ ಸಿನಿಮಾ ಖಂಡಿತವಾಗಿ ಭಿನ್ನವಾಗಿರುತ್ತದೆ. ಸದ್ಯ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಹೆಚ್ಚಿನ ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಸ್ಟೆತೋಸ್ಕೋಪ್ ಹಿಡಿದ ಗೋಲ್ಡನ್ ಸ್ಟಾರ್.. ಇದು ಗಣಿಯ ಸಕ್ಸಸ್ ಕಹಾನಿಯ ಸೀಕ್ರೆಟ್