ಕರ್ನಾಟಕ

karnataka

ETV Bharat / entertainment

ಮತ್ತೆ ಕಾಂಗರೂ ಸಿನಿಮಾದಲ್ಲಿ ಖಾಕಿ ತೊಟ್ಟು ಅಬ್ಬರಿಸಲಿರುವ ನಟ ಆದಿತ್ಯ - ನಟ ಆದಿತ್ಯ

ಬೆಂಗಳೂರು ಅಂಡರ್​ವರ್ಲ್ಡ್​ ಸಿನಿಮಾದ ಬಳಿಕ ನಟ ಆದಿತ್ಯ ಕಾಂಗರೂ ಚಿತ್ರದಲ್ಲಿ ಮತ್ತೆ ಖಾಕಿ ತೊಟ್ಟು ತೆರೆ ಮೇಲೆ ಖಡಕ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

actor-adithyas-new-movie-kangaroo
ಮತ್ತೆ ಕಾಂಗರೂ ಸಿನಿಮಾದಲ್ಲಿ ಖಾಕಿ ತೊಟ್ಟು ಅಬ್ಬರಿಸಲಿರುವ ನಟ ಆದಿತ್ಯ

By ETV Bharat Karnataka Team

Published : Jan 11, 2024, 1:31 PM IST

ಡೆಡ್ಲಿ ಸೋಮ ಹಾಗು ಎದೆಗಾರಿಕೆ ಚಿತ್ರಗಳ ಮೂಲಕ ಸ್ಯಾಂಡಲ್​ ವುಡ್​ನಲ್ಲಿ ತನ್ನದೇ ಛಾಪು ಮೂಡಿಸಿರುವ ನಟ‌ ಆದಿತ್ಯ. ಬೆಂಗಳೂರು ಅಂಡರ್ ವರ್ಲ್ಡ್ ಚಿತ್ರದ ಬಳಿಕ ನಟ ಆದಿತ್ಯ ಕಾಂಗರೂ ಎಂಬ ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತಾ ಇರೋದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಕಾಂಗರೂ ಚಿತ್ರತಂಡ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿ ಡಬ್ಬಿಂಗ್ ಕೆಲಸದಲ್ಲಿ ಬ್ಯುಸಿಯಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕನ್ನಡ ಚಿತ್ರರಂಗದ ಸ್ಟಾರ್ ಒಬ್ಬರು ನಮ್ಮ ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಲಿದ್ದಾರೆ.

ನಿರ್ದೇಶಕ ಕಿಶೋರ್ ಮೇಗಳಮನೆ ನಿರ್ದೇಶನದ ಕಾಂಗರೂ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಸೇರಿದಂತೆ ವಿವಿಧೆಡೆ ಚಿತ್ರೀಕರಣ ನಡೆದಿದೆ. ಕಾಂಗರೂ ಚಿತ್ರ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ನಟ ಆದಿತ್ಯ

ಬೆಂಗಳೂರು ಅಂಡರ್ ವರ್ಲ್ಡ್ ಚಿತ್ರದ ನಂತರ ಮತ್ತೆ ಆದಿತ್ಯ ಖಾಕಿ ತೊಟ್ಟು ಪೊಲೀಸ್ ಅಧಿಕಾರಿಯಾಗಿ ತೆರೆ ಮೇಲೆ ಖಡಕ್​ ಆಗಿ ಕಾಣಿಸಿಕೊಳ್ಳಲಿದ್ದಾರೆ. ಆದಿತ್ಯಗೆ ಜೋಡಿಯಾಗಿ ನಟಿ ರಂಜನಿ ರಾಘವನ್ ಅಭಿನಯಿಸಿದ್ದು, ಮನೋವೈದ್ಯೆಯ ಪಾತ್ರ ನಿರ್ವಹಿಸಿದ್ದಾರೆ. ಈ ಸಿನಿಮಾದಲ್ಲಿ ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ಅಭಿನಯಿಸಿದ್ದಾರೆ. ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ ಈ ಚಿತ್ರವನ್ನು ನಿರ್ಮಾಣ‌ ಮಾಡುತ್ತಿದ್ದಾರೆ.

ನಿರ್ದೇಶಕ ಕಿಶೋರ್ ಮೇಗಳಮನೆ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಬರೆದಿದ್ದಾರೆ, ಸಾಧುಕೋಕಿಲ ಸಂಗೀತ ನೀಡಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ. ಮೋಷನ್ ಪಿಕ್ಚರ್ಸ್ ಬಿಡುಗಡೆ ಬಳಿಕ ಸಿನಿಮಾ ರಿಲೀಸ್​ ಮಾಡಲು ಚಿತ್ರ ತಂಡ ಮುಂದಾಗಿದೆ.

ಇದನ್ನೂ ಓದಿ :ಕ್ಲಾಂತ ಸಿನಿಮಾಗೆ ಸಾಥ್ ಕೊಟ್ಟ ಅಜಯ್ ರಾವ್

ABOUT THE AUTHOR

...view details