ನಟ ಚೇತನ್ ಒಂದಲ್ಲಾ ಒಂದು ಹೇಳಿಕೆ ನೀಡುವ ಮೂಲಕ ಸಾಕಷ್ಟು ವಿವಾದಗಳನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಈ ಹಿಂದೆ ಕಾಂತಾರ ಚಿತ್ರದ ಭೂತಕೋಲದ ಬಗ್ಗೆ ಮಾತನಾಡಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ನಟ ಚೇತನ್ ಇದೀಗ ಮೊತ್ತೊಂದು ಹೇಳಿಕೆ ನೀಡುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ.
''ನಿನ್ನೆ ನಡೆದ ಕಾಲೇಜ್ ಫೆಸ್ಟ್‌ನಲ್ಲಿ ಬೆಂಗಳೂರಿನ 3 ವಿದ್ಯಾರ್ಥಿಗಳು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಇದನ್ನು ವಿನೋದಕ್ಕಾಗಿ ಮಾಡಲಾಗಿದೆ. ಈ ಕಾರಣಕ್ಕಾಗಿ ಆರ್ಯನ್, ರಿಯಾ ಮತ್ತು ದಿನಕರ್ ಅವರನ್ನು ಥಳಿಸಿ ಬೆದರಿಸಿ ಮತ್ತು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದು ಅಸಂಬದ್ಧ ಮತ್ತು ಅಪಾಯಕಾರಿ.
ಪಾಕಿಸ್ತಾನದ ಜನರು ನಮ್ಮ ಸಹೋದರಿಯರು ಮತ್ತು ಸಹೋದರರು, ನಮ್ಮ ಶತ್ರುಗಳಲ್ಲ. ವಾಕ್ ಸ್ವಾತಂತ್ರ್ಯವನ್ನು ನಾವು ಎತ್ತಿ ಹಿಡಿಯಬೇಕು'' ಎಂದು ಟ್ವೀಟ್ ಮಾಡುವ ಮೂಲಕ ಸಾರ್ವಜನಿಕರಿಂದ ತೀರ್ವ ಟೀಕೆಗೆ ಒಳಗಾಗುತ್ತಿದ್ದಾರೆ.