ಕಾಂತಾರ, ಭೂತಕೋಲ, ಹಿಂದು ಧರ್ಮ ಕುರಿತು ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದ ಆ ದಿನಗಳು ಖ್ಯಾತಿಯ ನಟ ಚೇತನ್ ಕುಮಾರ್ ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿ ಎಂ ಇಬ್ರಾಹಿಂ ಟಿಪ್ಪು ಸುಲ್ತಾನ್ ಪ್ರತಿಮೆ ಬೇಡ, ಪ್ರತಿಮೆ ಸ್ಥಾಪಿಸುವುದನ್ನು ಇಸ್ಲಾಂ ಒಪ್ಪುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಇದು ಅವರ ಅವಿವೇಕ ಮತ್ತು ಮೂರ್ಖತನದ ಹೇಳಿಕೆಯಾಗಿದೆ ಎಂದು ಚೇತನ್ ವ್ಯಂಗ್ಯವಾಡಿದ್ದಾರೆ.
ಮುಸಲ್ಮಾನರಾಗಿ ಹುಟ್ಟಿದ ಟಿಪ್ಪುವಿನ ಮೇಲೆ ಹಿಂದುತ್ವದ ದ್ವೇಷವನ್ನು ನಾವು ಖಂಡಿಸಲೇಬೇಕು ಮತ್ತು ಟಿಪ್ಪುವಿನ ಮೇಲೆ ಇಸ್ಲಾಮಿಸ್ಟ್ ಲಾಬಿಗಳ ಇಸ್ಲಾಮಿನ ಹೇರಿಕೆಯನ್ನು ಕೂಡ ನಾವು ವಿರೋಧಿಸಬೇಕು. ಟಿಪ್ಪು ಸುಲ್ತಾನ್ ಆಧುನಿಕ ಕರ್ನಾಟಕದ ಐಕಾನ್ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಇಸ್ಲಾಂ ಧರ್ಮದಲ್ಲಿ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ಇಲ್ಲ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ
ಇತ್ತೀಚೆಗೆ ಬಿಡುಗಡೆ ಆದ ಕನ್ನಡದ ಕಾಂತಾರ ಸಿನಿಮಾ ಇಡೀ ಭಾರತೀಯ ಚಿತ್ರರಂಗವನ್ನೇ ಸ್ಯಾಂಡಲ್ವುಡ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಭೂತಕೋಲ ಹಿಂದು ಧರ್ಮದ ಒಂದು ಭಾಗ ಎಂದ ನಟ ರಿಷಬ್ ಶೆಟ್ಟಿ ಹೇಳಿಕೆಯನ್ನು ಖಂಡಿಸಿ ವಿವಾದಕ್ಕೀಡಾಗಿದ್ದರು. ಇದೀಗ ಪ್ರತಿಮೆ ಸ್ಥಾಪಿಸುವುದನ್ನು ಇಸ್ಲಾಂ ಒಪ್ಪುವುದಿಲ್ಲ ಎಂಬ ಸಿ ಎಂ ಇಬ್ರಾಹಿಂ ಹೇಳಿಕೆಗೆ ಕಿಡಿಕಾರಿದ್ದಾರೆ.