ಕರ್ನಾಟಕ

karnataka

ETV Bharat / entertainment

'ಡೆವಿಲ್' ಸಿನಿಮಾದಲ್ಲಿ ‌ಕಲ್ಯಾಣ್ ರಾಮ್ - ಜಯಂರವಿ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್ - ಜಯಂರವಿ ಲೇಟೆಸ್ಟ್ ನ್ಯೂಸ್

ಕಲ್ಯಾಣ್ ರಾಮ್ ಅಭಿನಯದ 'ಡೆವಿಲ್' ಸಿನಿಮಾದ ಸಣ್ಣ ಗ್ಲಿಂಪ್ಸ್ ಅನಾವರಣಗೊಂಡಿದೆ. ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜಯಂರವಿ ನಟನೆಯ ಮುಂದಿನ ಚಿತ್ರಕ್ಕೆ ಶೀರ್ಷಿಕೆ ಇಡಲಾಗಿದೆ.

actor Kalyan Ram in Devil movie
'ಡೆವಿಲ್' ಸಿನಿಮಾದಲ್ಲಿ ‌ಕಲ್ಯಾಣ್ ರಾಮ್ - ಜಯಂರವಿ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್

By

Published : Jul 6, 2023, 9:50 AM IST

ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ಕಲ್ಯಾಣ್ ರಾಮ್ ಅವರು ನಿನ್ನೆ ಜನ್ಮದಿನ ಆಚರಿಸಿಕೊಂಡಿದ್ದಾರೆ. 45ನೇ ಹುಟ್ಟುಹಬ್ಬದ ಉಡುಗೊರೆಯಾಗಿ 'ಡೆವಿಲ್' ಸಿನಿಮಾದ ಸಣ್ಣ ಗ್ಲಿಂಪ್ಸ್ ಅನ್ನು ರಿಲೀಸ್ ಮಾಡಲಾಗಿದೆ. ಸದಾ ಹೊಸ ಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಲ್ಯಾಣ್ ರಾಮ್ ಈ ಬಾರಿಯೂ ವಿಶಿಷ್ಟ ಕಥೆಯೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಇತ್ತ ಸೂಪರ್​ ಹಿಟ್ ಪೊನ್ನಿಯಿನ್ ಸೆಲ್ವನ್ ಸ್ಟಾರ್ ಜಯಂರವಿ ಅವರ ಮುಂದಿನ ಸಿನಿಮಾ ಶೀರ್ಷಿಕೆಯೂ ಬಿಡುಗಡೆಯಾಗಿದೆ.

ಫಸ್ಟ್ ಲುಕ್ ಮೂಲಕ ನಿರೀಕ್ಷೆ ಹೆಚ್ಚಿಸಿದ್ದ 'ಡೆವಿಲ್' ಸಿನಿಮಾದ ಸಣ್ಣ ಗ್ಲಿಂಪ್ಸ್ ಅನಾವರಣಗೊಂಡಿದ್ದು, ಭಾರಿ ಸದ್ದು ಮಾಡುತ್ತಿದೆ. 1 ನಿಮಿಷ 2 ಸೆಕೆಂಡ್ ಇರುವ ಝಲಕ್​ನಲ್ಲಿ ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್ ಏಜೆಂಟ್ ಕಥೆಯನ್ನು ಸಿನಿಮಾ ಹೇಳಲಿದೆ ಎಂಬುದು ಗೊತ್ತಾಗಿದೆ. ಗೂಢಾಚಾರಿ ಹೇಗೆ ಇರಬೇಕು ಅನ್ನೋದನ್ನು ವಿವರಿಸುತ್ತಾ ಎಂಟ್ರಿ ಕೊಡುವ ಕಲ್ಯಾಣ್ ರಾಮ್ ಲುಕ್ ಪ್ರೇಕ್ಷಕರ ಗಮನ ಸೆಳೆದಿದೆ‌. ಕ್ಯಾಮರಾ ವರ್ಕ್ ಹಾಗೂ ಹಿನ್ನೆಲೆ ಸಂಗೀತ ಅದ್ಭುತವಾಗಿ ಮೂಡಿಬಂದಿದೆ. ಕಲ್ಯಾಣ್ ರಾಮ್ ಅವರಿಗೆ ಜೋಡಿಯಾಗಿ ಸಂಯುಕ್ತ ಮೆನನ್ ಅಭಿನಯಿಸಿದ್ದಾರೆ.

'ಡೆವಿಲ್' ಸಿನಿಮಾದಲ್ಲಿ ‌ಕಲ್ಯಾಣ್ ರಾಮ್

ನವೀನ್ ಮೇಡಾರಂ ನಿರ್ದೇಶನದ ಡೆವಿಲ್ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನು ಶ್ರೀಕಾಂತ್ ವಿಸ್ಸಾ ಒದಗಿಸಿದ್ದಾರೆ. ಹರ್ಷವರ್ಧನ್ ರಾಮೇಶ್ವರ್ ಚಿತ್ರಕ್ಕೆ ಸಂಗೀತ, ಸೌಂದರರಾಜನ್ ಛಾಯಾಗ್ರಹಣ ಜವಾಬ್ದಾರಿ ಹೊತ್ತಿದ್ದಾರೆ. ಡೆವಿಲ್ ಸಿನಿಮಾವನ್ನು ದೇವಾಂಶ್ ನಾಮಾ ಪ್ರೆಸೆಂಟ್ ಮಾಡುತ್ತಿದ್ದು, ಅಭಿಷೇಕ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅಭಿಷೇಕ್ ನಾಮಾ ನಿರ್ಮಿಸುತ್ತಿದ್ದಾರೆ. ತೆಲುಗು, ಹಿಂದಿ, ತಮಿಳು ಮತ್ತು ಕನ್ನಡ ಭಾಷೆಗಳಲ್ಲಿ ಡೆವಿಲ್ ಮೂಡಿಬರಲಿದೆ.

ಜಯಂರವಿ ಮುಂದಿನ ಸಿನಿಮಾ: ಪೊನ್ನಿಯಿನ್ ಸೆಲ್ವನ್ ನಟ ಜಯಂರವಿ ಅವರೀಗ ಪ್ಯಾನ್ ಇಂಡಿಯಾ ಸ್ಟಾರ್. ಇತ್ತೀಚೆಗೆಷ್ಟೇ ಇರೈವನ್ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿರುವುದಾಗಿ ಘೋಷಿಸಿದ್ದರು. ಇದೀಗ ಇವರ 32ನೇ ಚಿತ್ರಕ್ಕೆ ಟೈಟಲ್ ಫಿಕ್ಸ್ ಮಾಡಲಾಗಿದೆ. ವೆಲ್ಸ್ ಫಿಲಂಸ್ ಇಂಟರ್‌ನ್ಯಾಶನಲ್‌ನಡಿ ಡಾ. ಇಶಾರಿ ಕೆ. ಗಣೇಶ್ ಅವರು ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸಿದ್ದು, ಚೆನ್ನೈನಲ್ಲಿ ನಿನ್ನೆ ಸೆಟ್ಟೇರಿರುವ ಸಿನಿಮಾಗೆ ಜೀನಿ ಎಂಬ ಟೈಟಲ್ ಇಡಲಾಗಿದೆ.

ಜಯಂರವಿ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್

ಇದನ್ನೂ ಓದಿ:10 ವರ್ಷಗಳ ಬ್ರೇಕ್ ಬಳಿಕ ಬರಲಿದೆ ಅಮೀರ್ ಖಾನ್ - ರಾಜ್‌ಕುಮಾರ್ ಹಿರಾನಿ ಸಿನಿಮಾ

ಯುವ ನಿರ್ದೇಶಕ ಅರ್ಜುನನ್ ಜೆ. ಆರ್ ನಿರ್ದೇಶನದಲ್ಲಿ ಬರ್ತಿರುವ ಸಿನಿಮಾದಲ್ಲಿ ಜಯಂರವಿ ನಾಯಕನಾಗಿ ನಟಿಸುತ್ತಿದ್ದು, ಕೃತಿ ಶೆಟ್ಟಿ, ಕಲ್ಯಾಣಿ ಪ್ರಿಯದರ್ಶನ್, ವಾಮಿಕಾ ಗಬ್ಬಿ ಮತ್ತು ದೇವಯಾನಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಹೇಶ್ ಮುತ್ತುಸಾಮಿ ಕ್ಯಾಮರಾ ವರ್ಕ್, ಎ.ಆರ್. ರೆಹಮಾನ್ ಸಂಗೀತ ಸಂಯೋಜನೆ, ಪ್ರದೀಪ್ ಇ. ರಾಘವ್ ಸಂಕಲನ ಚಿತ್ರಕ್ಕಿರಲಿದೆ. ಹಾಲಿವುಡ್ ಮತ್ತು ಅಂತಾರಾಷ್ಟ್ರೀಯ ಚಿತ್ರರಂಗದ ಅತ್ಯಂತ ಪ್ರಸಿದ್ಧ ಸ್ಟಂಟ್ ಕೊರಿಯೋಗ್ರಾಫರ್‌ಗಳಲ್ಲಿ ಒಬ್ಬರಾದ ಯಾನಿಕ್ ಬೆನ್ ಅವರು ಆ್ಯಕ್ಷನ್ ಸೀಕ್ವೆನ್ಸ್ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ:ಶಾರುಖ್​ ಖಾನ್ ಸಿನಿಮಾ ದಾಖಲೆ: ಬಿಡುಗಡೆಗೂ ಮುನ್ನ 480 ಕೋಟಿ ರೂ. ವ್ಯವಹಾರ ನಡೆಸಿದ ಜವಾನ್, ಡಂಕಿ!

'ಜೀನಿ' ವೆಲ್ಸ್ ಫಿಲ್ಮ್ ಇಂಟರ್‌ನ್ಯಾಶನಲ್‌ನ 25ನೇ ಚಿತ್ರವಾಗಿದ್ದು, ಬಿಗ್​ ಬಜೆಟ್‌ನಲ್ಲಿ ತಯಾರಾಗಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ. ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲಿ ಜೀನಿ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ.

ABOUT THE AUTHOR

...view details