ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕರಲ್ಲಿ ಒಬ್ಬರಾದ ಕೋಡ್ಲು ರಾಮಕೃಷ್ಣ ಈಗ ಮತ್ತೊಂದು ಕಾದಂಬರಿ ಆಧಾರಿತ ಚಿತ್ರದೊಂದಿಗೆ ಬರುತ್ತಿದ್ದಾರೆ. ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಆಧಾರಿತ ಶಾನುಭೋಗರ ಮಗಳು ಚಿತ್ರದಲ್ಲಿ ಸ್ವತಂತ್ರ ಪೂರ್ವದ ಕಥೆಯನ್ನು ನಿರ್ದೇಶಕ ಕೋಡ್ಲು ರಾಮಕೃಷ್ಣ ಬೆಳ್ಳಿ ತೆರೆ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದಾರೆ.
ಲಾ ಸಿನಿಮಾ ಹಾಗು ಜಾಹೀರಾತು ಕ್ಷೇತ್ರದಲ್ಲಿ ಬೇಡಿಕೆ ಹೊಂದಿರುವ ರಾಗಿಣಿ ಪ್ರಜ್ವಲ್ ಶಾನುಭೋಗರ ಮಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದ ವಿಶೇಷ ಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕೂಡ ಅಭಿನಯಿಸಲಿದ್ದಾರೆ. ರಾಗಿಣಿ ಪ್ರಜ್ವಲ್ ಅಲ್ಲದೇ ಮೇಘಶ್ರೀ, ನಿರಂಜನ್ ಶೆಟ್ಟಿ, ರಮೇಶ್ ಭಟ್, ಸುಧಾ ಬೆಳವಾಡಿ, ಭಾಗ್ಯಶ್ರೀ, ಟಿ.ಎನ್.ಶ್ರೀನಿವಾಸಮೂರ್ತಿ, ಟೆನ್ನಿಸ್ ಕೃಷ್ಣ ಮುಂತಾದವರು ಚಿತ್ರದ ತಾರಾ ಬಳಗದಲ್ಲಿದ್ದಾರೆ.