ಕರ್ನಾಟಕ

karnataka

ETV Bharat / entertainment

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್: 'ಜಾತರೆ' ಮಾಡಲು ಸಜ್ಜಾದ ಡೈನಾಮಿಕ್ ಪ್ರಿನ್ಸ್​ - jatare

ನಟ ಪ್ರಜ್ವಲ್ ದೇವರಾಜ್ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Prajwal Devaraj in Pan India Movie
ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್

By

Published : Jun 20, 2023, 1:37 PM IST

Updated : Jun 20, 2023, 2:41 PM IST

ಟೈಟಲ್ ಲಾಂಚ್ ಕಾರ್ಯಕ್ರಮ

2007ರಿಂದ ಸಿನಿಮಾ ವೃತ್ತಿ ಜೀವನ ಆರಂಭಿಸಿ, ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಬೇಡಿಕೆ ಹೊಂದಿರುವ ನಟ‌ ಪ್ರಜ್ವಲ್ ದೇವರಾಜ್. ಲವ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್ ಹೀಗೆ ವಿವಿಧ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆದ್ರೆ ಈವರೆಗೆ ದೊಡ್ಡ ಬ್ರೇಕ್​ ಕೊಡುವ ಸಿನಿಮಾದಲ್ಲಿ ಪ್ರಜ್ವಲ್ ದೇವರಾಜ್ ಕಾಣಿಸಿಕೊಂಡಿಲ್ಲ ಅನ್ನೋದು ಅಭಿಮಾನಿಗಳ ಬೇಸರ. ಸೂಪರ್​ ಡೂಪರ್​ ಹಿಟ್​ ಸಿನಿಮಾಗಾಗಿ ಅಭಿಮಾನಿ ಬಳಗ ಕಾದು ಕುಳಿತಿದೆ.

5 ಭಾಷೆಗಳಲ್ಲಿ ಜಾತರೆ ಸಿನಿಮಾ: ನಟ ಪ್ರಜ್ವಲ್ ದೇವರಾಜ್ ಇದೇ ಮೊದಲ ಬಾರಿಗೆ ಬಿಗ್ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿರುವ ಪ್ಯಾನ್ ಇಂಡಿಯಾ ಚಿತ್ರವೊಂದರಲ್ಲಿ ನಟಿಸಲು ಸಜ್ಜಾಗಿದ್ದಾರೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಸೇರಿ 5 ಭಾಷೆಗಳಲ್ಲಿ ಪ್ರಜ್ವಲ್ ದೇವರಾಜ್ ಅವರ ಮುಂದಿನ ಸಿನಿಮಾ ಮೂಡಿ ಬರಲಿದೆ. ಈ ಬಹುನಿರೀಕ್ಷಿತ ಚಿತ್ರದ ಹೆಸರು "ಜಾತರೆ". ಆ್ಯಕ್ಷನ್​, ಲವ್, ಫ್ಯಾಮಿಲಿ ಸೆಂಟಿಮೆಂಟ್ ಕಥಾಹಂದರ ಇರುವ ಈ ಚಿತ್ರದಲ್ಲಿ ಪ್ರಜ್ವಲ್ ಈವರೆಗೆ ನಿರ್ವಹಿಸಿರದ ಪಾತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಸಂಪೂರ್ಣ ವಿಭಿನ್ನ ಲುಕ್​ನಲ್ಲಿ ಪ್ರಜ್ವಲ್ ಕಾಣಿಸಿಕೊಳ್ಳಲಿದ್ದಾರೆ.

ಉದಯ್ ನಂದನವನಂ ನಿರ್ದೇಶನದಲ್ಲಿ ಜಾತರೆ: ಈಗಾಗಲೇ ತೆಲುಗಿನಲ್ಲಿ ಹಲವಾರು ಯಶಸ್ವಿ ಚಿತ್ರಗಳನ್ನು ನಿರ್ದೇಶನ ಮಾಡಿರುವ ಉದಯ್ ನಂದನವನಂ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಹೈದರಾಬಾದ್‌ ಮೂಲದ ಹೆಸರಾಂತ ವರ್ಧಮಾನ್ ಫಿಲಂಸ್ ಹಾಗೂ ಲೋಟಸ್ ಎಂಟರ್​ಟೈನ್​​ಮೆಂಟ್ಸ್ ಮೂಲಕ ಗೋವರ್ಧನ್ ರೆಡ್ಡಿ ಅವರು ಈ ಚಿತ್ರವನ್ನು ಅದ್ಧೂರಿ ವೆಚ್ಚದಲ್ಲಿ‌ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ:ಪೋಷಕರಾದ ರಾಮ್ ​ಚರಣ್​ - ಉಪಾಸನಾ ದಂಪತಿ: ಅಪೋಲೋ ಆಸ್ಪತ್ರೆಯಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಆಗಸ್ಟ್​ನಲ್ಲಿ ಶೂಟಿಂಗ್​​ ಶುರು, ಜನವರಿಯಲ್ಲಿ ತೆರೆಗೆ: ಇತ್ತೀಚೆಗೆ ಈ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಬೆಂಗಳೂರಿನ ಸಹಕಾರ ನಗರದ ನಿರ್ಮಾಪಕರ ಕಚೇರಿಯಲ್ಲಿ ನಡೆಯಿತು. ಆಗಸ್ಟ್​ನಲ್ಲಿ ಚಿತ್ರದ ಶೂಟಿಂಗ್​​ ಪ್ರಾರಂಭಿಸಿ, ಬರುವ ಜನವರಿಯಲ್ಲಿ ಸಂಕ್ರಾಂತಿ ವೇಳೆಗೆ ಚಿತ್ರವನ್ನು ರಿಲೀಸ್ ಮಾಡುವ ಯೋಜನೆ ಚಿತ್ರತಂಡದ್ದು. ಭೀಮ್ಸ್ ಸೆಸಿರೋಲಿಯೋ ಅವರ ಸಂಗೀತ, ಸಾಯಿಶ್ರೀರಾಂ ಅವರ ಛಾಯಾಗ್ರಹಣ, ಬಿ.ವಾಸುದೇವರೆಡ್ಡಿ ಅವರ ಕಥೆ, ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿರಲಿದೆ. ಚಿತ್ರದ ನಾಯಕಿ, ಉಳಿದ ಪಾತ್ರವರ್ಗ ಹಾಗೂ ತಾಂತ್ರಿಕರ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ.

ಇದನ್ನೂ ಓದಿ:ಆದಿಪುರುಷ್​​ ಗಳಿಕೆ ಇಳಿಕೆ: ಮೂರು ದಿನದಲ್ಲಿ 300 ಕೋಟಿ ಗಳಿಸಿದ ಚಿತ್ರದ ನಾಲ್ಕನೇ ದಿನದ ಕಲೆಕ್ಷನ್​ 20 ಕೋಟಿ!

'ಗಣ' ಪ್ರಜ್ವಲ್​ ದೇವರಾಜ್​ ನಟಿಸುತ್ತಿರುವ ಮತ್ತೊಂದು ಸಿನಿಮಾ. ಇತ್ತೀಚೆಗಷ್ಟೇ ನಟನ ಫಸ್ಟ್ ಲುಕ್​ ಅನಾವರಣಗೊಂಡಿದೆ. ಪ್ರಜ್ವಲ್ ದೇವರಾಜ್ ಅವರಿಗೆ ಯಶಾ ಶಿವಕುಮಾರ್ ಜೋಡಿಯಾಗಿ ನಟಿಸಿದ್ದಾರೆ. ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್. ಪೇಟೆ, ರಮೇಶ್ ಭಟ್ ಸೇರಿ ಹಲವರು ಗಣ ತಾರಾಬಳಗದಲ್ಲಿದ್ದಾರೆ.

Last Updated : Jun 20, 2023, 2:41 PM IST

ABOUT THE AUTHOR

...view details