2007ರಲ್ಲಿ 18ರ ಹರೆಯದಲ್ಲೇ 'ಸಿಕ್ಸರ್' ಸಿನಿಮಾ ಮೂಲಕ ಹೀರೋ ಆಗಿ ಸಕ್ಸಸ್ ಕಂಡ ನಟ ಪ್ರಜ್ವಲ್ ದೇವರಾಜ್ ಈಗ ಮಾಫಿಯಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಲೋಹಿತ್ ಹೆಚ್ ನಿರ್ದೇಶನದ ಸಿನಿಮಾದಲ್ಲಿ ಅವರು ಖಾಕಿ ಖದರ್ನಲ್ಲಿ ಅಬ್ಬರಿಸುವರು. ಸಾಹಸ ಸನ್ನಿವೇಶವೊಂದರ ಚಿತ್ರೀಕರಣ ಹೈದರಾಬಾದ್ನ ರಾಮೋಜಿ ಫಿಲಂ ಸಿಟಿಯಲ್ಲಿ ಅಪಾರ ವೆಚ್ಚದಲ್ಲಿ ಅದ್ಧೂರಿಯಾಗಿ ನಡೆಯುತ್ತಿದೆ.
ವಿನೋದ್ ಸಾಹಸ ಸಂಯೋಜನೆಯಲ್ಲಿ ನಟ ಪ್ರಜ್ವಲ್ ದೇವರಾಜ್ ಹಾಗೂ ಸಹ ಕಲಾವಿದರು ಪಾಲ್ಗೊಂಡಿದ್ದಾರೆ. ಚಿತ್ರದಲ್ಲಿ ನಾಲ್ಕು ಸಾಹಸ ಸನ್ನಿವೇಶಗಳಿವೆ. ಕ್ಲೈಮ್ಯಾಕ್ಸ್ ಭಾಗದ ಸಾಹಸ ದೃಶ್ಯವನ್ನು ರಾಮೋಜಿ ಫಿಲಂ ಸಿಟಿಯಲ್ಲಿ ಶೂಟಿಂಗ್ ಮಾಡಲಾಗುತ್ತಿದೆ.