ಕರ್ನಾಟಕ

karnataka

ETV Bharat / entertainment

'ವೈರಂ' ಸಿನಿಮಾ‌ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಪ್ರಣಾಮ್ ದೇವರಾಜ್ - ಸ್ಯಾಂಡಲ್​ವುಡ್​ ಹಿರಿಯ ನಟ ದೇವರಾಜ್

ಕುಮಾರಿ 21 ಸಿನಿಮಾ ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಿರುವ ಪ್ರಣಾಮ್ ದೇವರಾಜ್ ವೈರಂ ಸಿನಿಮಾ‌ ಮೂಲಕ ಮತ್ತೆ ಬೆಳ್ಳಿ ತೆರೆಯತ್ತ ದಾಪುಗಾಲಿಟ್ಟಿದ್ದಾರೆ.

Pranam Devaraj tested his luck again  Devaraj tested his luck again with Vairam  Actor Pranam Devaraj movies  ಬೆಳ್ಳಿ ತೆರೆಯಲ್ಲಿ ಮಿಂಚಿರುವ ಪ್ರಣಾಮ್ ದೇವರಾಜ್  ವೈರಂ ಸಿನಿಮಾ‌ ಮೂಲಕ ಮತ್ತೆ ಅದೃಷ್ಟ ಪರೀಕ್ಷೆ  ಅದೃಷ್ಟ ಪರೀಕ್ಷೆ ಇಳಿದ ಪ್ರಣಾಮ್ ದೇವರಾಜ್  ಪ್ರಣಾಮ್ ದೇವರಾಜ್ ಹಿರಿಯನಟ ದೇವರಾಜ್ ಕಿರಿಯ ಮಗ  ವೈರಂ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ  ಅಮ್ಮ ಚಂದ್ರಲೇಖಾ ದೇವರಾಜ್  ಸ್ಯಾಂಡಲ್​ವುಡ್​ ಹಿರಿಯ ನಟ ದೇವರಾಜ್  ಹಿಂದಿನ ಚಿತ್ರದಲ್ಲಿ ಚಾಕೊಲೇಟ್ ಬಾಯ್
ವೈರಂ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟ ದೇವರಾಜ್​

By

Published : Jan 12, 2023, 1:31 PM IST

ಪ್ರಣಾಮ್ ದೇವರಾಜ್ ಕನ್ನಡದ ಹಿರಿಯ ನಟ ದೇವರಾಜ್ ಅವರ ಕಿರಿಯ ಮಗ. ಅಪ್ಪ ಮತ್ತು ಅಣ್ಣನಂತೆ ಸಿನಿಮಾ ರಂಗದಲ್ಲಿ ಗುರುತಿಸಿಕೊಳ್ಳಬೇಕೆಂದು ಪಣ ತೊಟ್ಟು ನಿಂತಿರುವ ಯುವ ನಟ. ಈಗಾಗಲೇ ಕುಮಾರಿ 21 ಸಿನಿಮಾ ಮೂಲಕ ಬೆಳ್ಳಿ ತೆರೆಯಲ್ಲಿ ಮಿಂಚಿರುವ ಪ್ರಣಾಮ್ ದೇವರಾಜ್ ನಾಲ್ಕು ವರ್ಷಗಳ ಬಳಿಕ ಮತ್ತೆ ಸಿಲ್ವರ್ ಸ್ಕ್ರೀನ್​ನಲ್ಲಿ ಮಿಂಚಲು ರೆಡಿಯಾಗಿದ್ದಾರೆ.

ಪ್ರಣಾಮ್​ ದೇವರಾಜ್​ ವೈರಂ ಎಂಬ ಸಿನಿಮಾ‌‌ ಮೂಲಕ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ. ವೈರಂ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಕಾರ್ಯಕ್ರಮಕ್ಕೆ ತಂದೆ ದೇವರಾಜ್, ಅಮ್ಮ ಚಂದ್ರಲೇಖಾ ದೇವರಾಜ್ ಹಾಗೂ ಅತ್ತಿಗೆ ರಾಗಿಣಿ ಪ್ರಜ್ವಲ್ ಆಗಮಿಸಿ ಟೀಸರ್ ಬಿಡುಗಡೆ ಮಾಡಿ ಪ್ರಣಾಮ್​ ಅವರಿಗೆ ಗುಡ್ ಲಕ್ ಹೇಳಿದ್ದರು.

ವೈರಂ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಟ ದೇವರಾಜ್​

ಟೀಸರ್ ಬಿಡುಗಡೆ ಬಳಿಕ ಮಾತನಾಡಿದ ದೇವರಾಜ್, ಕನ್ನಡ ಚಿತ್ರರಂಗ ಈಗ ಮತ್ತೆ ಬ್ಯುಸಿಯಾಗಿದೆ. ಇಂತಹ ಸಮಯದಲ್ಲಿ ನನ್ನ ಮಗನ 2ನೇ ಸಿನಿಮಾ ಬರುತ್ತಿದೆ. ನಿರ್ದೇಶಕ ಸಾಯಿಶಿವನ್ ಒಳ್ಳೆಯ ಸಿನಿಮಾ ಮಾಡಿದ್ದಾರೆ. ಚಿತ್ರದ ಹಾಡುಗಳನ್ನು ಕೇಳಿದ್ದು, ಚೆನ್ನಾಗಿ ಮೂಡಿಬಂದಿವೆ. ಈ ಸಿನಿಮಾ ಶತದಿನೋತ್ಸವ ಆಚರಿಸಲಿ ಎಂದು ಹಾರೈಸುತ್ತೇನೆ ಎಂದರು.

ವೈರಂ ಸಿನಿಮಾದ ನಟಿ ಮತ್ತು ನಟ

ನಟ ಪ್ರಣಾಮ್ ದೇವರಾಜ್ ಮಾತನಾಡಿ, ಚಿಕ್ಕ ವಯಸ್ಸಿನಿಂದ ಅಪ್ಪ, ಅಣ್ಣನ ಸಿನಿಮಾಗಳನ್ನು ನೋಡಿಕೊಂಡು ಬೆಳೆದಿದ್ದೇನೆ. 4 ವರ್ಷಗಳ ನಂತರ ಈ ಸ್ಟೇಜ್ ಮೇಲೆ ನಿಂತು ಮಾತನಾಡುತ್ತಿದ್ದೇನೆ. ಈ ಹಿಂದಿನ ಚಿತ್ರದಲ್ಲಿ ಚಾಕೊಲೆಟ್ ಬಾಯ್ ಆಗಿದ್ದೆ. ಈ ಸಿನಿಮಾದಲ್ಲಿ ಆಕ್ಷನ್ ಹೀರೋ ಆಗಿದ್ದೇನೆ. ಸಾಯಿ ಶಿವನ್ ಅವರಲ್ಲಿ ತುಂಬಾ ಕಾನ್ಫಿಡೆನ್ಸ್ ಇದೆ. ನಿರ್ಮಾಪಕರಾಗಿ ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ತುಂಬಾ ಸಪೋರ್ಟ್ ಮಾಡಿದ್ದಾರೆ. ಡಿಒಪಿ ಕೆಲಸವೂ ಅದ್ಭುತವಾಗಿದೆ ಎಂದರು.

ನಾನು ಇಷ್ಟು ಚೆನ್ನಾಗಿ ತೆರೆಮೇಲೆ ಕಾಣಿಸಲು ಅವರೇ ಕಾರಣ. ಒಬ್ಬ ಹೀರೋ ಗುರುತಿಸಿಕೊಳ್ಳೋದು ಅವನೆದುರು ಸ್ಟ್ರಾಂಗ್ ವಿಲನ್ ಇದ್ದಾಗ. ನನಗೆ ಎರಡನೇ ಚಿತ್ರದಲ್ಲೇ ಗರುಡರಾಮ್​ರಂಥ ಖಳನಟರೆದುರು ಅಭಿನಯಿಸುವ ಅವಕಾಶ ಸಿಕ್ಕಿದೆ. ಶಂಕರ್ ಅಶ್ವಥ್ ಹಾಗೂ ವೀಣಾಸುಂದರ್ ನನ್ನ ತಂದೆ, ತಾಯಿ ಪಾತ್ರ ಮಾಡಿದ್ದಾರೆ. ಚಿತ್ರದಲ್ಲಿ ಎಂಜಾಯ್ ಮಾಡುವಂಥ 4 ಹಾಡುಗಳಿದ್ದು, ಕವಿರಾಜ್, ನಾಗೇಂದ್ರ ಪ್ರಸಾದ್, ರಾಮ್ ನಾರಾಯಣ್ ಹಾಡುಗಳನ್ನು ಬರೆದಿದ್ದಾರೆ ಎಂದು ನಾಯಕ ಪ್ರಣಾಮ್ ದೇವರಾಜ್ ತಿಳಿಸಿದರು.

ಚಿತ್ರದ ನಾಯಕಿ ಮೋನಾಲ್ ಮಾತನಾಡುತ್ತಾ, ಇದು ನನ್ನ ಮೊದಲ ಕನ್ನಡ ಚಿತ್ರ. ಒಬ್ಬ ಕ್ರಿಶ್ಚಿಯನ್ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಒಂದೊಳ್ಳೆ ಲವ್ ಸ್ಟೋರಿ ಚಿತ್ರದಲ್ಲಿದೆ ಎಂದರು. ಕೆಜಿಎಫ್ ಖ್ಯಾತಿಯ ಗರುಡ ರಾಮ್ ಮಾತನಾಡಿ, ಚಿತ್ರದಲ್ಲಿ ಜನರಿಗೆ ಒಂದು ಯೂನಿವರ್ಸಲ್ ಮೆಸೇಜ್ ಇದೆ. ಜನ ಬದಲಾಗಬೇಕು ಎಂದು ಹೇಳಲಾಗಿದೆ. ಜನ ಸಪೋರ್ಟ್ ಮಾಡುತ್ತಾರೆಂಬ ನಂಬಿಕೆಯಿದೆ ಎಂದರು.

ಚಿತ್ರದ ನಿರ್ದೇಶಕ ಸಾಯಿಶಿವನ್ ಮಾತನಾಡಿ, ಚಿತ್ರದಲ್ಲಿ ಹೀರೋ ಡೆಡಿಕೇಶನ್, ಇನ್ವಾಲ್​ಮೆಂಟ್ ತುಂಬಾ ಚೆನ್ನಾಗಿತ್ತು. ಆತ ಸಿಂಗಲ್ ಟೇಕ್ ಆರ್ಟಿಸ್ಟ್ ಎಂದು ನಿರ್ದೇಶಕ ಸಾಯಿಶಿವನ್, ಪ್ರಣಾಮ್ ದೇವರಾಜ್ ಅವರನ್ನು ಹೊಗಳಿದರು. ಆಕ್ಷನ್ ಜೊತೆಗೆ ಲವ್ ಸ್ಟೋರಿ ಕಥೆ ಆಧರಿಸಿರುವ ವೈರಂ ಸಿನಿಮಾವನ್ನು ನಿರ್ಮಾಪಕರಾದ ಜೆ. ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ನಿರ್ಮಾಣ ಮಾಡಿದ್ದಾರೆ.

ವೈರಂ ಚಿತ್ರ ತಂಡ

ಗೋಪಿನಾಥ್ ಛಾಯಾಗ್ರಹಣ ಹಾಗೂ ಮಹತಿ ಸ್ವರಸಾಗರ್ ಅವರ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಒಬ್ಬ ಆಂಗ್ರಿ ಯಂಗ್ ಮ್ಯಾನ್ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ ಚಿತ್ರವೇ ವೈರಂ. ಸದ್ಯ ಟೀಸರ್​ನಿಂದಲೇ ಗಮನ ಸೆಳೆಯುತ್ತಿರುವ ವೈರಂ ಚಿತ್ರ ಪ್ರಣಾಮ್ ದೇವರಾಜ್ ಒಳ್ಳೆ ಹೆಸರು ತಂದು ಕೊಡುತ್ತಾ? ಕಾದು ನೋಡಬೇಕು.

ಇದನ್ನೂ ಓದಿ:ನಾಟು ನಾಟು ಹಾಡು ಬರೆಯಲು 19 ತಿಂಗಳು ತೆಗೆದುಕೊಂಡೆ: ಗೀತೆ ರಚನೆಕಾರ ಚಂದ್ರಬೋಸ್

ABOUT THE AUTHOR

...view details