ಟಾಲಿವುಡ್ ಚಿತ್ರರಂಗದ ಪ್ರತಿಭಾನ್ವಿತ ನಟ ಉಸ್ತಾದ್ ರಾಮ್ ಪೋತಿನೇನಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಮ್ ಜನುಮದಿನದ ನಿಮಿತ್ತ ‘ಬೋಯಾಪಾಟಿರ್ಯಾಂಪೋ’ ಚಿತ್ರದ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆಗಿದೆ. ಕೈಯಲ್ಲಿ ಕತ್ತಿ ಹಿಡಿದು, ಎಮ್ಮೆಯೊಟ್ಟಿಗೆ ಮಾಸ್ ಡೈಲಾಗ್ ಹೊಡೆಯುತ್ತಾ ರಗಡ್ ಲುಕ್ ನಲ್ಲಿ ರಾಮ್ ಪೋತಿನೇನಿ ಎಂಟ್ರಿ ಕೊಟ್ಟಿದ್ದಾರೆ. ಮಾಸ್ ಪ್ರಿಯರಿಗೆ ಹೇಳಿಮಾಡಿಸಿದಂತಿರುವ ಬೋಯಾಪಾಟಿರ್ಯಾಂಪೋ ಸಿನಿಮಾಗೆ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳ ಸಾರಥಿ ಬೋಯಾಪಾಟಿ ಸೀನು ಆಕ್ಷನ್ ಕಟ್ ಹೇಳಿದ್ದಾರೆ.
ಲವರ್ ಬಾಯ್ ಆಗಿ ಮಿಂಚುತ್ತಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ದರ್ಶನ ಕೊಟ್ಟಿದ್ದಾರೆ. ಕನ್ನಡತಿ ಶ್ರೀಲೀಲಾ ರಾಮ್ ಗೆ ಜೋಡಿಯಾಗಿ ನಟಿಸಿದ್ದಾರೆ. ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್ ಎಸ್ ಮ್ಯೂಸಿಕ್ ಕಿಕ್ ಚಿತ್ರಕ್ಕಿದೆ. ಸದ್ಯ ಬೋಯಾಪಾಟಿರ್ಯಾಂಪೋ ಎಂಬ ಶೀರ್ಷಿಕೆ ಇಡಲಾಗಿದ್ದು, ಮುಂದಿನ ದಿನಗಳಲ್ಲಿ ಬೇರೆ ಟೈಟಲ್ ರಿವೀಲ್ ಮಾಡಲಿದೆ ಚಿತ್ರತಂಡ. ಬೋಯಾಪಾಟಿ ಶೀನು ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ನಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ. ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ಬೋಯಾಪಾಟಿರ್ಯಾಂಪೋ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಪಕ್ಕ ಮಾಸ್ ಎಂಟರ್ ಟೈನರ್ ಜಾನರ್ ನ ಈ ಚಿತ್ರ ಇದೇ ವರ್ಷ ಅಕ್ಟೋಬರ್ 20ರಂದು ವರ್ಲ್ಡ್ ವೈಡ್ ರಿಲೀಸ್ ಆಗಲಿದೆ.