ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮತ್ತು ನಟ ರಣ್ವೀರ್ ಸಿಂಗ್ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆಯೆನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿ ಅಭಿಮಾನಿಗಳ ಚಿಂತೆಗೆ ಕಾರಣವಾಗಿತ್ತು. ಆದರೀಗ ಈ ಬಗ್ಗೆ ಸ್ವತಃ ನಟ ರಣ್ವೀರ್ ಸಿಂಗ್ ಮೌನ ಮುರಿದಿದ್ದು, ಅಭಿಮಾನಿಗಳು ನಿರಾಳರಾಗಿದ್ದಾರೆ.
ದೀಪಿಕಾ ಮತ್ತು ರಣವೀರ್ ನಡುವೆ ಎಲ್ಲವೂ ಸರಿ ಇಲ್ಲ ಎಂದು ಉಮೈರ್ ಸಂಧು ಟ್ವೀಟ್ ಮಾಡಿದ್ದರು. ಇದನ್ನು ನೋಡಿ ಅಭಿಮಾನಿಗಳಿಗೆ ಶಾಕ್ ಆಗಿತ್ತು.
ಅಂದಹಾಗೆ, ಇವರು ವಿದೇಶಿ ಸೆನ್ಸಾರ್ ಮಂಡಳಿಯ ಸದಸ್ಯ. ಭಾರತದ ಸಿನಿಮಾಗಳನ್ನು ಅವರು ವಿಮರ್ಶೆ ಮಾಡುತ್ತಾರೆ. ಆ ಮೂಲಕ ಅವರು ಸೋಶಿಯಲ್ ಮೀಡಿಯಾದಲ್ಲಿ ಫೇಮಸ್. ಅವರ ಖಾತೆಯನ್ನು ಬಹಳಷ್ಟು ಸಿನಿಪ್ರಿಯರು ಫಾಲೋ ಮಾಡುತ್ತಾರೆ. ಈಗ ಏಕಾಏಕಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಸಂಸಾರದ ಬಿರುಕಿನ ಬಗ್ಗೆ ಉಮೈರ್ ಸಂಧು ಟ್ವೀಟ್ ಮಾಡಿರುವುದು ಫ್ಯಾನ್ಸ್ ಆತಂಕಕ್ಕೆ ಕಾರಣ ಆಗಿತ್ತು.
ಆದರೆ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ರಣವೀರ್ ಸಿಂಗ್ ಅವರಿಗೆ ನೇರವಾಗಿ ಪ್ರಶ್ನೆ ಮಾಡಲಾಗಿದೆ. ಅದಕ್ಕೆ ಪ್ರತಿಕ್ರಿಯಿಸಿದ ಅವರು, 'ನಾನು ಮತ್ತು ದೀಪಿಕಾ ಪಡುಕೋಣೆ 2012ರಲ್ಲಿ ಡೇಟಿಂಗ್ ಮಾಡಲು ಆರಂಭಿಸಿದೆವು. 2022ಕ್ಕೆ 10 ವರ್ಷ ಆಯ್ತು, ಎಲ್ಲವೂ ಸರಿ ಇದೆ, ಆ ದೇವರಿಗೆ ಧನ್ಯವಾದ' ಎಂದು ಹೇಳುವ ಮೂಲಕ ತಾವಿಬ್ಬರೂ ಇನ್ನೂ ಅನ್ಯೋನ್ಯವಾಗಿಯೇ ಇದ್ದೇವೆ ಎಂದು ಹೇಳಿದ್ದಾರೆ. ಇದನ್ನು ಕೇಳಿದ ಅಭಿಮಾನಿಗಳಿಗೆ ಸಮಾಧಾನ ಆಗಿದೆ.
ಇದನ್ನೂ ಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಖುಷ್ಬೂ.. ಸುಂದರ ಚೆಲುವೆಗೆ ಶುಭಾಶಯಗಳ ಮಹಾಪೂರ
ಇನ್ನು, ಈ ವರ್ಷ ರಣವೀರ್ ಸಿಂಗ್ ಅವರಿಗೆ ಫಿಲ್ಮ್ಫೇರ್ ಪ್ರಶಸ್ತಿ ದಕ್ಕಿದೆ. ಅದನ್ನು ಸ್ವೀಕರಿಸುವಾಗ ವೇದಿಕೆ ಮೇಲೆ ದೀಪಿಕಾರನ್ನೂ ಕರೆದರು. 'ನನ್ನ ಯಶಸ್ಸಿನ ಗುಟ್ಟು ನನ್ನ ಪತ್ನಿ ದೀಪಿಕಾ ಪಡುಕೋಣೆ' ಎಂದು ರಣವೀರ್ ಹೇಳಿದ್ದ ವಿಡಿಯೋ ತುಣುಕು ವೈರಲ್ ಆಗಿತ್ತು. ಇದಲ್ಲದೇ ಬಹುತೇಕ ವೇದಿಕೆಗಳಲ್ಲಿ ರಣ್ವೀರ್ ಅವರು ದೀಪಿಕಾ ಮೇಲಿನ ಪ್ರೀತಿ ವ್ಯಕ್ತಪಡಿಸಿದ್ದಾರೆ.