ಭಾರತೀಯ ಚಿತ್ರರಂಗದಲ್ಲಿ ಕಾಂತಾರ ಸಿನಿಮಾದ್ದೇ ಹವಾ. ಚಿತ್ರ ಬಿಡುಗಡೆ ಆಗಿ 50 ದಿನ ಕಳೆದರೂ ಕ್ರೇಜ್ ಕಡಿಮೆಯಾಗಿಲ್ಲ. ಈಗಾಗಲೇ ಕನ್ನಡ ಅಲ್ಲದೇ ಹಿಂದಿ, ತೆಲುಗು, ತಮಿಳು, ಮಲೆಯಾಳಂನಲ್ಲಿ ಬಿಡುಗಡೆ ಆಗಿ 400 ಕೋಟಿ ಕಲೆಕ್ಷನ್ ಮಾಡಿರುವ ಕಾಂತಾರ ತುಳು ಭಾಷೆಯಲ್ಲೂ ಬಿಡುಗಡೆ ಆಗಲು ಸಜ್ಜಾಗಿದೆ.
ಗಡಿ ದಾಟಿ ಸದ್ದು ಮಾಡುತ್ತಿರುವ ರಿಷಬ್ ಅವರ ಈ ಚಿತ್ರಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಿಷಬ್ ಶೆಟ್ಟಿ ಮತ್ತು ಗೋವಾ ಸಿಎಂ ಇಬ್ಬರೂ ನಿನ್ನೆ ಸಂಜೆ ಭೇಟಿ ಆಗಿದ್ದಾರೆ. ಗೋವಾದಲ್ಲಿ ನಡೆಯುತ್ತಿರುವ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾದಲ್ಲಿ ರಿಷಬ್ ಶೆಟ್ಟಿ ಭಾಗಿಯಾಗಿದ್ದು, ಅವರ ಚಿತ್ರದ ಬಗ್ಗೆ ಹಾಡಿ ಹೊಗಳಿದ್ದಾರೆ ಸಿಎಂ ಸಾವಂತ್.