ಕರುನಾಡ ಚಕ್ರವರ್ತಿ ಶಿವ ರಾಜ್ಕುಮಾರ್ ನಾಯಕ ನಟನಾಗಿ ಅಭಿನಯಿಸುತ್ತಿರುವ ಮುಂದಿನ ಚಿತ್ರ ಘೋಸ್ಟ್. ಸದ್ಯ ಟೈಟಲ್ನಿಂದಲೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಟಾಕ್ ಆಗುತ್ತಿರುವ ಘೋಸ್ಟ್ ಚಿತ್ರದ ಮುಹೂರ್ತ ಸಮಾರಂಭ ಮಿನರ್ವ ಮಿಲ್ನಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಗೀತಾ ಶಿವ ರಾಜ್ಕುಮಾರ್ ಆರಂಭ ಫಲಕ ತೋರಿದರು. ಬೃಂದಾ ಜಯರಾಂ ದೃಶ್ಯ ಸೆರೆ ಹಿಡಿದರು.
ಘೋಸ್ಟ್ ಚಿತ್ರದ ಮುಹೂರ್ತ ಸಮಾರಂಭ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅದ್ಧೂರಿ ಸೆಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಮಿನರ್ವ ಮಿಲ್ನಲ್ಲಿ 15 ವಿಭಿನ್ನ ಸೆಟ್ಗಳನ್ನು ಹಾಗೂ ಮೈಸೂರಿನಲ್ಲಿ 4 ಸೆಟ್ಗಳನ್ನು ಕಲಾ ನಿರ್ದೇಶಕ ಮೋಹನ್ ಬಿ ಕೆರೆ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮಿನರ್ವ ಮಿಲ್ನಲ್ಲಿ ನಿರ್ಮಿಸಲಾಗಿರುವ ಜೈಲ್ ಸೆಟ್ನಲ್ಲೇ 24 ದಿನಗಳ ಚಿತ್ರೀಕರಣ ನಡೆಯಲಿದೆ. ಈ ಅದ್ಧೂರಿ ಸೆಟ್ಗಳ ನಿರ್ಮಾಣಕ್ಕೆ ಸುಮಾರು 3 ಕೋಟಿ ರೂ. ವೆಚ್ಚವಾಗಿದೆಯಂತೆ.
ಘೋಸ್ಟ್ ಚಿತ್ರದ ಮುಹೂರ್ತ ಸಮಾರಂಭ ಸದ್ಯ ಶಿವರಾಜ್ ಕುಮಾರ್ ಲುಕ್ ಔಟ್ ಅಂಡ್ ಔಟ್ ಮಾಸ್ ಆಗಿದೆ. ಬಹು ಭಾಷೆ ನಟರಾದ ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಘೋಸ್ಟ್ ಚಿತ್ರತಂಡ ಸೇರಿಕೊಂಡಿದ್ದಾರೆ. ಇದರ ಜೊತೆಗೆ ಹಿರಿಯ ನಟ ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ:ನೈಜ ಘಟನೆ ಆಧಾರಿತ ಅಂಬುಜಾ ಸಿನಿಮಾದಲ್ಲಿ ನಟಿ ಶುಭಾಪೂಂಜಾ.. ಟೀಸರ್ ರಿಲೀಸ್
ಇನ್ನು ಶ್ರೀನಿವಾಸ ಕಲ್ಯಾಣ, ಓಲ್ಡ್ ಮಾಂಕ್ ಅಂತಹ ಸಿನಿಮಾಗಳನ್ನು ನಿರ್ದೇಶಿಸಿರುವ ಶ್ರೀನಿ ನಿರ್ದೇಶನದ ಐದನೇ ಚಿತ್ರ "ಘೋಸ್ಟ್". ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದ್ದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ "ಘೋಸ್ಟ್ " ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಈಗಾಗಲೇ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.