ಬಳ್ಳಾರಿಯ ಹೊಸಪೇಟೆಯಲ್ಲಿ ಭಾನುವಾರ ಕ್ರಾಂತಿ ಸಿನಿಮಾದ ಎರಡನೇ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಗಲಾಟೆ ನಡೆದಿದೆ. ಕ್ರಾಂತಿ ಚಿತ್ರದ ಎರಡನೇ ಸಾಂಗ್ ಬೊಂಬೆ ಬೊಂಬೆ ಹಾಡು ರಿಲೀಸ್ ಕಾರ್ಯಕ್ರಮ ಇನ್ನೇನು ಶುರುವಾಗಬೇಕು ಅನ್ನುವಷ್ಟರಲ್ಲಿ ಈ ಗಲಾಟೆ ನಡೆದಿತ್ತು.
ಈ ಘಟನೆಯನ್ನು ನಟ ಶಿವರಾಜ್ ಕುಮಾರ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಸ್ಟಾರ್ಗಳು ಖಂಡಿಸಿದ್ದಾರೆ. ನಟರಾದ ಪ್ರೇಮ್, ಶರಣ್, ಲೂಸ್ ಮಾದ ಯೋಗಿ, ಅಭಿಷೇಕ್ ಅಂಬರೀಶ, ರಾಜವರ್ಧನ್, ಪ್ರಜ್ವಲ್ ದೇವರಾಜ್ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನಟ ಶಿವರಾಜ್ ಕುಮಾರ್ ಕೂಡ ಈ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಕಲಾವಿದರೆಲ್ಲಾ ಒಂದೇ ಕುಟುಂಬದವರು. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುಕೊಳ್ಳುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ.. ದ್ವೇಷ ಅಗೌರವವನ್ನಲ್ಲ ಎಂದು ಶಿವರಾಜ್ ಕುಮಾರ್ ವಿಡಿಯೋ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:'ವೇದ' ಕೌಟುಂಬಿಕ ಸದಭಿರುಚಿಯ ಸಿನಿಮಾ: ನಟ ಶಿವರಾಜ್ ಕುಮಾರ್