ಮುಂಬೈ (ಮಹಾರಾಷ್ಟ್ರ): ಹಿರಿಯ ನಟ ವಿಕ್ರಮ್ ಗೋಖಲೆ ಅವರ ಪುತ್ರಿ ತಮ್ಮ ತಂದೆಯ ಸಾವಿನ ವದಂತಿ ತಳ್ಳಿಹಾಕಿದ್ದು, 'ತಂದೆ ಇನ್ನೂ ಜೀವಂತವಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಲೈಫ್ ಸಪೋರ್ಟ್ನಲ್ಲಿದ್ದಾರೆ' ಎಂದು ಸ್ಪಷ್ಟಪಡಿಸಿದ್ದಾರೆ. ಅವರಿಗಾಗಿ ನಿರಂತರವಾಗಿ ಪ್ರಾರ್ಥಿಸಿ ಎಂದೂ ಹೇಳಿಕೊಂಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ವಿಕ್ರಮ್ ಗೋಖಲೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಧ್ಯರಾತ್ರಿ ಟ್ವೀಟ್ ಮಾಡಿತ್ತು. ಮತ್ತೊಂದೆಡೆ, ಬೆಳಗ್ಗಿನ ಜಾವ 2 ಗಂಟೆಗೆ ಗೋಖಲೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ಮಗಳು ಹೇಳಿರುವುದಾಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿತ್ತು. ಈ ಮಾಹಿತಿಯನ್ನು ಪರಿಶೀಲಿಸದೆಯೇ ರಾಜ್ಯ ಸರ್ಕಾರದ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿರುವುದು ಇದೀಗ ಹಲವರ ಟೀಕೆಗೆ ಗುರಿಯಾಗಿದೆ.