ದೊಡ್ಮನೆ ಕುಡಿ ವಿನಯ್ ರಾಜ್ಕುಮಾರ್ ಸಿಕ್ಕ ಪಾತ್ರಗಳಲ್ಲಿ ಅಭಿನಯಿಸಿ ಕನ್ನಡಿಗರ ಮನ ಗೆದ್ದಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಸುಪುತ್ರ ನಿನ್ನೆಯಷ್ಟೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಬರ್ತ್ಡೇ ಆಚರಿಸಿಕೊಂಡಿರುವ ರಾಯಲ್ ಸ್ಟಾರ್ಗೆ 'ಪೆಪೆ' ಸಿನಿಮಾ ಚಿತ್ರತಂಡದಿಂದ ಸ್ಪೆಷಲ್ ಗಿಫ್ಟ್ ಸಿಕ್ಕಿದೆ.
ವಿನಯ್ ಜನ್ಮದಿನದ ಸಲುವಾಗಿ ಪೆಪೆ ಟೀಸರ್ ರಿಲೀಸ್ ಆಗಿದ್ದು ನಟ ಮಾಸ್ ಅವತಾರದಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಹಳ್ಳಿ ಬ್ಯಾಕ್ ಡ್ರಾಪ್ ನಲ್ಲಿ ಮೂಡಿಬಂದಿರುವ ಟೀಸರ್ ಝಲಕ್ನಲ್ಲಿ ವಿನಯ್ ರಗಡ್ ಲುಕ್ನಲ್ಲಿ ಮಿಂಚಿದ್ದಾರೆ. ಅಂದಹಾಗೇ ಪೆಪೆ ಗ್ಯಾಂಗ್ ಸ್ಟಾರ್ ಸಿನಿಮಾ ಆಗಿದ್ದು, ವಿನಯ್ ರಾಜ್ಕುಮಾರ್ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಇಲ್ಲಿ ವಿಭಿನ್ನ ಅವತಾರ ತಾಳಿದ್ದಾರೆ.
ಬಹುತೇಕ ಚಿತ್ರೀಕರಣ ಕಂಪ್ಲೀಟ್: ಬಹುತೇಕ ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ. ಗ್ಯಾಂಗ್ ಸ್ಟಾರ್ ಕಥೆ ಆಧಾರಿತ ಸಿನಿಮಾ ಕೂಡಾ ಆಗಿದೆ. ವಿನಯ್ ರಾಜ್ ಕುಮಾರ್ ತಮ್ಮ ಈ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಡಿಫ್ರೆಂಟ್ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಂದೇ ಶೈಲಿಯ ಸಿನಿಮಾಗೆ ಒಗ್ಗಿಕೊಳ್ಳದೇ, ಪ್ರತಿ ಬಾರಿ ವಿಭಿನ್ನ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವ ವಿನಯ್ ರಾಜ್ ಕುಮಾರ್ ಈ ಚಿತ್ರದಲ್ಲಿ ಸಂಪೂರ್ಣವಾಗಿ ಬೇರೆಯದ್ದೇ ಅವತಾರ ತಾಳಿದ್ದಾರೆ. ದೊಡ್ಮನೆ ಅಭಿಮಾನಿ ಬಳಗ ವಿನಯ್ ಲುಕ್ ಕಂಡು ಥ್ರಿಲ್ ಆಗಿದ್ದು, ಸಿನಿಮಾ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ.