ಮಾಲಾಶ್ರೀ ಕನ್ನಡ ಚಿತ್ರರಂಗದ ಕನಸಿನ ರಾಣಿ. ಸೌಂದರ್ಯ ಮತ್ತು ನಟನೆಯಿಂದ ಅಪಾರ ಅಭಿಮಾನಿಗಳನ್ನೂ ಹೊಂದಿದ್ದ ನಟಿ. ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಹುಟ್ಟು ಹಾಕಿದ್ದರು. ಇದೀಗ ಅವರ ಪುತ್ರಿ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದ್ದಾರೆ.
ಕನಸಿನ ರಾಣಿಯ ಪುತ್ರಿ ಚಿತ್ರರಂಗಕ್ಕೆ ಎಂಟ್ರಿ: ಮಾಲಾಶ್ರೀ ಪುತ್ರಿ ರಾಧನಾ ರಾಮ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದಾರೆ. ವಿಶೇಷ ಎಂದರೆ ಮೊದಲ ಚಿತ್ರದಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ಬಣ್ಣ ಹಚ್ಚುತ್ತಿದ್ದಾರೆ. ಹೌದು, ರಾಕ್ಲೈನ್ ವೆಂಕಟೇಶ್ ನಿರ್ಮಾಣದ ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ದರ್ಶನ್ ಅವರ 56ನೇ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ನಾಯಕಿ ಆಗಿ ಪದಾರ್ಪಣೆ ಮಾಡಲಿದ್ದಾರೆ.