ಕರ್ನಾಟಕ

karnataka

ETV Bharat / entertainment

‘ತತ್ಸಮ ತದ್ಭವ’ ಮೂಲಕ ಮೇಘನಾ ರಾಜ್​ ರೀ ಎಂಟ್ರಿ; ಪೋಸ್ಟರ್​ ರಿಲೀಸ್​ ಮಾಡಿದ 100ಕ್ಕೂ ಹೆಚ್ಚು ನಟ-ನಟಿಯರು - meghana raj news movie poster

‘‘ತತ್ಸಮ ತದ್ಬವ’’ ಚಿತ್ರದ ಮೂಲಕ ಮತ್ತೆ ಸಿನಿಮಾದಲ್ಲಿ ನಟಿಸಲು ರೆಡಿಯಾದ ಮೇಘನಾ ರಾಜ್.

actress-meghana-raj-released-her-new-movie-poster
‘‘ತತ್ಸಮ ತದ್ಭವ’’ ಚಿತ್ರದ ಮೂಲಕ ಮೇಘನಾ ರಾಜ್​ ರೀ ಎಂಟ್ರಿ, ಪೋಸ್ಟರ್​ ರಿಲೀಸ್​ ಮಾಡಿದ ನೂರಕ್ಕು ಹೆಚ್ಚು ನಟ-ನಟಿಯರು

By

Published : Feb 20, 2023, 11:03 PM IST

ಚಿರು ನಿಧನದ ಬಳಿಕ ನಟನೆಯಿಂದ ದೂರ ಉಳಿದುಕೊಂಡಿದ್ದ ಮೇಘನಾ ರಾಜ್​ ಇದೀಗ ಮತ್ತೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಪ್ರೀತಿಸಿ ಮದುವೆಯಾದ ತಾರೆಯರಲ್ಲಿ ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್​ ಜೋಡಿ ಕೂಡ ಒಂದು. ಆದರೆ, ಮದುವೆಯಾದ ಕೆಲವೇ ವರ್ಷಗಳಲ್ಲಿ ಚಿರು ಅಕಾಲಿಕ ಮರಣ ಹೊಂದಿದ್ದು, ಇಡೀ ಕನ್ನಡ ಚಿತ್ರರಂಗಕ್ಕೆ ದೊಡ್ಡ ಅಘಾತ ಉಂಟು ಮಾಡಿತ್ತು.

ರಾಜಾಹುಲಿ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು, ಸಿನಿಮಾ ರಂಗದಲ್ಲಿ ತನ್ನದೇ ಆದ ಬೇಡಿಕೆ ಹೊಂದಿರುವ ನಟಿ ಸದ್ಯ ರಿಯಾಲಿಟಿ ಶೋ ಹಾಗೂ ಮಗನ ಆರೈಕೆಯಲ್ಲಿ ಬ್ಯುಸಿಯಾಗಿದ್ದಾರೆ. ಮೇಘಾನ ರಾಜ್ ಸ್ರ್ತೀ ಪ್ರಧಾನ ಚಿತ್ರದ ಮೂಲಕ ಗುಡ್ ಕಮ್‌ ಬ್ಯಾಕ್ ಮಾಡಲು ರೆಡಿಯಾಗಿದ್ದಾರೆ. ಈ ಚಿತ್ರಕ್ಕೆ "ತತ್ಸಮ ತದ್ಭವ" ಟೈಟಲ್ ಇಟ್ಟಿದ್ದು, ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹೊರಬಂದಿದೆ.

ಫ್ರೆಂಚ್ ಬಿರಿಯಾನಿ ಸಿನಿಮಾದ ನಿರ್ದೇಶಕ ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನೂತನ ಪ್ರತಿಭೆ ವಿಶಾಲ್ ಆತ್ರೇಯ ನಿರ್ದೇಶಿಸಿರುವ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ. ವಿಶೇಷವೆಂದರೆ ‘‘ತತ್ಸಮ ತದ್ಭವ’’ ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನೂರಕ್ಕೂ ಹೆಚ್ಚು ನಟ ನಟಿಯರು ತಮ್ಮ ಸಮಾಜಿಕ ಜಾಲತಾಣದಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಪ್ರಪಂಚದಾದ್ಯಂತ 30ಕ್ಕೂ ಹೆಚ್ಚಿನ ದೇಶಗಳಲ್ಲಿರುವ ಕನ್ನಡ ಹಾಗೂ ಇತರೆ ಸಂಘಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಪ್ರೋತ್ಸಾಹ ನೀಡಿದ್ದಾರೆ.

ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನೀಡಿದ್ದು, ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನ, ನಿಖಿತ ಪ್ರಿಯ ವಸ್ತ್ರವಿನ್ಯಾಸ ಹಾಗೂ ಸಂತೋಷ್ ಪಂಚಾಲ್ ಕಲಾ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:ಸಿನಿಮಾದಲ್ಲಿ ಮಾತ್ರ ನೀನು ಹೀರೋ ಎಂದು ನಟನ ಮೇಲೆ ಹಲ್ಲೆ ಆರೋಪ: ಪ್ರಕರಣ ದಾಖಲು

ABOUT THE AUTHOR

...view details