ಕರ್ನಾಟಕ

karnataka

ETV Bharat / entertainment

ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿದ ನಟಿ ಪ್ರಿಯಾಂಕಾ ಉಪೇಂದ್ರ - ಕೈಮರ ಚಿತ್ರತಂಡ ಸ್ಪೆಷಲ್ ಪೋಸ್ಟರ್

ನಟಿ ಪ್ರಿಯಾಂಕಾ ಉಪೇಂದ್ರ ಕತ್ರಿಗುಪ್ಪೆ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕೇಕ್ ಕಟ್ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ.

Actress Priyanka upendra birthday celebration
ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿದ ನಟಿ ಪ್ರಿಯಾಂಕಾ ಉಪೇಂದ್ರ

By

Published : Nov 12, 2022, 6:32 PM IST

45ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟಿ ಪ್ರಿಯಾಂಕಾ ಉಪೇಂದ್ರ ಅವರಿಗೆ ಸ್ನೇಹಿತರು, ಅಭಿಮಾನಿಗಳು, ಆತ್ಮೀಯರು ಹಾಗೂ ಸ್ಯಾಂಡಲ್​​ವುಡ್​​ ಗಣ್ಯರು ಶುಭ ಕೋರುತ್ತಿದ್ದಾರೆ. ಅವರ ಕತ್ರಿಗುಪ್ಪೆ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕೇಕ್ ಕಟ್ ಮಾಡುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಜೊತೆ ಕೆಲ ಹೊತ್ತು ಉತ್ತಮ ಸಮಯ ಕಳೆದಿದ್ದಾರೆ.

ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಿಸಿದ ನಟಿ ಪ್ರಿಯಾಂಕಾ ಉಪೇಂದ್ರ

ಸದ್ಯ ಮಿಸ್ ನಂದಿನಿ,‌ ಉಗ್ರಾವತಾರ,‌ ಕೈಮರ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ‌ ಪ್ರಿಯಾಂಕಾ ಉಪೇಂದ್ರರ ಹುಟ್ಟು ಹಬ್ಬಕ್ಕೆ ಉಗ್ರಾವತಾರ ಚಿತ್ರದ ಸಾಂಗ್ ರಿಲೀಸ್ ಮಾಡುವ ಮೂಲಕ ಚಿತ್ರತಂಡ ಉಡುಗೊರೆ ನೀಡಿದೆ. ಕೈಮರ ಚಿತ್ರತಂಡ ಸ್ಪೆಷಲ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಪ್ರಿಯಾಂಕಾರಿಗೆ ವಿಶೇಷವಾಗಿ ಶುಭಕೋರಿದೆ.

ಇದನ್ನೂ ಓದಿ:ನಟಿ ಪ್ರಿಯಾಂಕಾ ಉಪೇಂದ್ರ ಜನ್ಮದಿನ: ಕೈಮರ ಚಿತ್ರ ತಂಡದಿಂದ ಸ್ಪೆಷಲ್ ಗಿಫ್ಟ್​​

ABOUT THE AUTHOR

...view details