ಕರ್ನಾಟಕ

karnataka

ETV Bharat / entertainment

'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರಕ್ಕೆ ನಟಿ ರಮ್ಯಾ ಸಾಥ್ - hostel hudugaru bekagiddare movie details

ಇಂದು ಸಂಜೆ ಆರು ಗಂಟೆಗೆ ಮೋಹಕ ತಾರೆ ರಮ್ಯಾ ಭಾಗಿಯಾಗಿರುವ ಚಿತ್ರದ ಪ್ರಮೋಷನಲ್ ಟೀಸರ್ ಬಿಡುಗಡೆ ಮಾಡುತ್ತಿದೆ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರತಂಡ.

hostel hudugaru bekagiddare movie promotion
'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರಕ್ಕೆ ನಟಿ ರಮ್ಯಾ ಸಾಥ್

By

Published : Nov 3, 2022, 12:15 PM IST

ಸ್ಯಾಂಡಲ್​ವುಡ್​ನಲ್ಲಿ ವಿಭಿನ್ನ ಶೀರ್ಷಿಕೆ ಮತ್ತು ಪ್ರಚಾರದಿಂದಲೇ ಸದ್ದು ಮಾಡುತ್ತಿರುವ ಸಿನಿಮಾ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ'. ಸೋಶಿಯಲ್ ಮೀಡಿಯಾದಲ್ಲಿ ಕ್ರಿಯೇಟಿವ್ ಆಗಿರೋ ಸಿನಿಮಾ ಪ್ರಮೋಷನಲ್ ವಿಡಿಯೋಗಳು ನಿಮ್ಮ ಗಮನ ಸೆಳೆದಿರಬಹುದು. ಅದಕ್ಕೂ ಮಿಗಿಲಾಗಿ ಎಲ್ಲರ ಮೆಚ್ಚಿನ ಪುನೀತ್ ರಾಜ್​ಕುಮಾರ್ ಅವರು ಚಿತ್ರದ ಪೋಸ್ಟರ್ ಲಾಂಚ್ ಮಾಡಿದ್ದರು. ಹೀಗೆ ಸ್ಟಾರ್ ನಟರ ಮೂಲಕ ಸಿನಿಮಾದ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿರುವ 'ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ' ಚಿತ್ರತಂಡಕ್ಕೆ ಇದೀಗ ನಟಿ ರಮ್ಯಾ ಸಾಥ್ ಸಿಕ್ಕಿದೆ.

ದಿವಂಗತ ಪುನೀತ್ ರಾಜ್​ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ ಅವರಿಂದ ಸಿನಿಮಾ ಪ್ರಮೋಷನ್​ ಆಗಿತ್ತು. ಚಿತ್ರದ ಇಂಟ್ರೆಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಸಿನಿ ಪ್ರಿಯರನ್ನು ಇಂಪ್ರೆಸ್ ಮಾಡಿತ್ತು. ಹೀಗೆ ವಿಭಿನ್ನವಾಗಿ ಸಿನಿಮಾ ಪ್ರಚಾರ ಮಾಡುತ್ತ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಈ ಚಿತ್ರತಂಡ.

ಚಿತ್ರತಂಡಕ್ಕೆ ಬೆಂಬಲ ಕೊಟ್ಟಿದ್ದ ದಿವಂಗತ ಪುನೀತ್ ರಾಜ್​ಕುಮಾರ್​

ಈ ಬಾರಿ ಮೋಹಕ ತಾರೆ ರಮ್ಯಾ ಅವರನ್ನು ಚಿತ್ರದ ಪ್ರಚಾರ ಕಾರ್ಯಕ್ಕಾಗಿ ಕರೆ ತಂದಿದೆ. ರಮ್ಯಾ ಅವರು ಕೂಡ ಬಹಳ ಖುಷಿಯಿಂದಲೇ ಚಿತ್ರದ ಪ್ರಮೋಷನಲ್ ಕಂಟೆಂಟ್ ವಿಡಿಯೋನಲ್ಲಿ ಭಾಗಿಯಾಗಿದ್ದಾರೆ. ಇಂದು ಸಂಜೆ ಆರು ಗಂಟೆಗೆ ಮೋಹಕ ತಾರೆ ರಮ್ಯಾ ಭಾಗಿಯಾಗಿರುವ ಚಿತ್ರದ ಪ್ರಮೋಷನಲ್ ಟೀಸರ್ ಬಿಡುಗಡೆ ಮಾಡುತ್ತಿದೆ ಚಿತ್ರತಂಡ.

ವರುಣ್ ಸ್ಟುಡಿಯೋಸ್ ಹಾಗೂ ಪ್ರಜ್ವಲ್ ಬಿ.ಪಿ ಅವರ ಗುಲ್ ಮೋಹರ್ ಫಿಲಂಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಈ ಚಿತ್ರದ ಕಥೆ ಮೊದಲು ಕೇಳಿದವರು ನಮ್ಮೆಲ್ಲರ ಪ್ರೀತಿಯ ಪುನೀತ್ ರಾಜ್​ಕುಮಾರ್. ಚಿತ್ರತಂಡ ಈ ಸಿನಿಮಾ ಚಿತ್ರೀಕರಣಕ್ಕೂ ಮೊದಲು ಅಪ್ಪು ಅವರ ಬಳಿ ಹೋಗಿ ಸಿನಿಮಾ ಬಗ್ಗೆ ಮಾತುಕತೆ ನಡೆಸಿದೆ. ಕಥೆ ಕೇಳಿ ಸಖತ್ ಇಂಪ್ರೆಸ್ ಆದ ಅಪ್ಪು ಸಿನಿಮಾ ಮಾಡಿ ಎಂದು ಇಡೀ ತಂಡಕ್ಕೆ ಬೆನ್ನುತಟ್ಟಿ ಪ್ರೋತ್ಸಾಹ ನೀಡಿದ್ದರು. ಅವರ ಆರ್ಶೀವಾದದೊಂದಿಗೆ ಸಿನಿಮಾದ ಚಿತ್ರೀಕರಣ ಆರಂಭಿಸಿದೆವು ಎಂದು ನಿರ್ಮಾಪಕರಾದ ವರುಣ್ ಕುಮಾರ್ ಹಾಗೂ ಪ್ರಜ್ವಲ್ ಬಿ.ಪಿ ತಿಳಿಸಿದ್ದಾರೆ.

ಚಿತ್ರಕ್ಕೆ ನಟ ಸುದೀಪ್​ ಸಾಥ್​

ಇದನ್ನೂ ಓದಿ:ಕಾಂತಾರ ನಟ, ನಿರ್ದೇಶಕ ರಿಷಬ್ ಶೆಟ್ಟಿ ದಂಪತಿ ಧರ್ಮಸ್ಥಳಕ್ಕೆ ಭೇಟಿ

ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಪ್ಲ್ಯಾನ್​ನಲ್ಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

ABOUT THE AUTHOR

...view details