ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಜೋಡಿಯ ಪಠಾಣ್ ಚಿತ್ರದ ಬೇಶರಂ ರಂಗ್ ಹಾಡಿನ ಮೇಲೆ ಆಕ್ರೋಶ ಹೆಚ್ಚಾಗುತ್ತಿದೆ. ಬಣ್ಣದ ವಿಚಾರಕ್ಕೆ ನಡೆಯುತ್ತಿರುವ ಈ ವಾದ ವಿವಾದಕ್ಕೂ ಹಲವರಿಂದ ಅಸಮಧಾನ ವ್ಯಕ್ತವಾಗುತ್ತಿದೆ. ಇದೀಗ ಬಾಲಿವುಡ್ನ ಪದ್ಮಾವತಿ ದೀಪಿಕಾ ಪಡುಕೋಣೆ ಪರ ಸ್ಯಾಂಡಲ್ವುಡ್ ಕ್ವೀನ್ ಬ್ಯಾಟಿಂಗ್ ಮಾಡಿದ್ದಾರೆ.
ಮೋಹಕತಾರೆ ರಮ್ಯಾ ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡಿ ತಮ್ಮ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಮೊದಲಿನಿಂದಲೂ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ, ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಅವರು ಈಗ ಬಿಕಿನಿ ವಾರ್ ಬಗ್ಗೆ ಅಸಮಧಾನ ಹೊರಹಾಕಿದ್ದಾರೆ. ಸಾಕಷ್ಟು ಟ್ರೋಲ್‌ಗಳಿಗೆ ಒಳಗಾಗಿರುವ ಸಮಂತಾ, ರಶ್ಮಿಕಾ, ಸಾಯಿ ಪಲ್ಲವಿ, ದೀಪಿಕಾ ಪಡುಕೋಣೆ ಪರ ನಟಿ ರಮ್ಯಾ ಧ್ವನಿ ಎತ್ತಿದ್ದಾರೆ.