ಬೆಂಗಳೂರು:ಈ ಹಿಂದೆ ಸಿಲ್ವರ್ ಸ್ಕ್ರೀನ್ ಮೇಲೆ ಮಿಂಚಿದ್ದ ಮೋಹಕ ತಾರೆ ರಮ್ಯಾ, ನಂತರ ರಾಜಕೀಯದಲ್ಲಿ ತೊಡಗಿಸಿಕೊಂಡರು. ಸದ್ಯ ರಾಜಕೀಯ ಮತ್ತು ಸಿನಿಮಾ ಕ್ಷೇತ್ರದಿಂದ ದೂರ ಉಳಿದಿರುವ ಅವರು ಸಮಾಜದಲ್ಲಿನ ಅಂಕುಡೊಂಕುಗಳ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಧ್ವನಿ ಎತ್ತುತ್ತಿದ್ದಾರೆ. ಆಗಾಗ ಕನ್ನಡ ಸಿನಿಮಾಗಳಿಗೆ ಸಪೋರ್ಟ್ ಮಾಡುತ್ತಿರುತ್ತಾರೆ. ಇದೀಗ ಡಾಲಿ ಧನಂಜಯ್ ಅಭಿನಯದ ಹೊಯ್ಸಳ ಸಿನಿಮಾದ ಶೂಟಿಂಗ್ ಸ್ಪಾಟ್ಗೆ ಭೇಟಿ ಕೊಟ್ಟು ಚಿತ್ರತಂಡದ ಜೊತೆ ಒಂದು ಗಂಟೆ ಕಾಲ ಕಳೆದಿದ್ದಾರೆ.
ಕಳೆದ ಒಂದು ವಾರದಿಂದ ಮೈಸೂರಿನಲ್ಲಿ ಹೊಯ್ಸಳ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಮ್ಯಾ ಹೊಯ್ಸಳ ಸಿನಿಮಾದ, ಚಿತ್ರೀಕರಣ ಸ್ಥಳಕ್ಕೆ ಭೇಟಿ ನೀಡುವ ಮೂಲಕ ಹೊಯ್ಸಳ ಚಿತ್ರತಂಡಕ್ಕೆ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಕೂಡ ಹೊಯ್ಸಳ ಸಿನಿಮಾ, ಚಿತ್ರೀಕರಣದ ಸ್ಥಳಕ್ಕೆ ಭೇಟಿ ನೀಡಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ವಿಜಯ್ ನಿರ್ದೇಶಿಸುತ್ತಿರುವ ಹೊಯ್ಸಳ ಚಿತ್ರದ ಸೆಟ್ಗೆ ಭೇಟಿ ನೀಡಿದೆ. ಆ್ಯಕ್ಷನ್ ದೃಶ್ಯವೊಂದನ್ನು ಚಿತ್ರೀಕರಿಸುತ್ತಿದ್ದರು. ಚಿತ್ರೀಕರಿಸಿರುವ ಕೆಲವು ಸಿಕ್ವೇನ್ಸ್ಗಳನ್ನು ನೋಡಿದೆ. ಬಹಳ ಚೆನ್ನಾಗಿ ಚಿತ್ರೀಕರಣ ಮಾಡುತ್ತಿದ್ದಾರೆ ಎಂದು ರಮ್ಯಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.