'ನ್ಯಾಷನಲ್ ಕ್ರಶ್' ಖ್ಯಾತಿಯ ರಶ್ಮಿಕಾ ಮಂದಣ್ಣ ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಸರಣಿ ಸಿನಿಮಾಗಳಲ್ಲಿ ಬ್ಯುಸಿ ಇರುವ ನಟಿ ಆಗಾಗ್ಗೆ ಪ್ರಮುಖ ಈವೆಂಟ್ಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ಗಮನ ಸೆಳೆಯುತ್ತಾರೆ. ನಟಿಯ ನಟನೆ ಮತ್ತು ಸೌಂದರ್ಯದ ಬಗ್ಗೆ ಅಭಿಮಾನಿಗಳು ಮಾತ್ರವಲ್ಲದೇ ದಕ್ಷಿಣ ಚಿತ್ರರಂಗದಿಂದ ಹಿಡಿದು ಬಾಲಿವುಡ್‌ನ ಸೆಲೆಬ್ರಿಟಿಗಳಲ್ಲೂ ಚರ್ಚೆ ನಡೆಯುತ್ತವೆ. ಅಭಿನಯದ ಜೊತೆಗೆ ಸೌಂದರ್ಯದ ಆಧಾರದ ಮೇಲೆ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ಬಾಲಿವುಡ್‌ನಲ್ಲೂ ಅವಕಾಶ ಸಿಕ್ಕಿದೆ.
ಬಹುಭಾಷಾ ಸಿನಿಮಾಗಳಲ್ಲಿ ಬ್ಯುಸಿ: ರಶ್ಮಿಕಾ ಮಂದಣ್ಣ ಭಾರತೀಯ ಚಿತ್ರರಂಗದ ಹಿಟ್ ನಟಿಯರ ಪೈಕಿ ಒಬ್ಬರಾಗಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸದ್ಯ ಬಹುಬೇಡಿಕೆ ನಟಿಯಾಗಿ ಬಹುಭಾಷಾ ಸಿನಿಮಾಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ವಿಶೇಷವಾಗಿ, ಟಾಲಿವುಡ್ ನೆಲದಲ್ಲಿ ತಮ್ಮ ಸ್ಥಾನ ಭ್ರದಪಡಿಸಿಕೊಂಡಿದ್ದಾರೆ.
ರಶ್ಮಿಕಾ ಮಂದಣ್ಣ ದಬೈ ಪ್ರವಾಸ: ನಟಿಯ ಬಾಲಿವುಡ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ನಟಿಗೆ ಸಂಬಂಧಿಸಿದ ಸುದ್ದಿಯೊಂದು ಸಖತ್ ಸದ್ದು ಮಾಡುತ್ತಿದೆ. ನಟಿ ಸುದ್ದಿಯಾಗಲು ಕಾರಣ, ಇತ್ತೀಚಿನ ದುಬೈ ಪ್ರವಾಸ. ದುಬೈ ಪ್ರವಾಸದ ವಿಡಿಯೋವೊಂದು ಆನ್ನೈನ್ನಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ, ರಶ್ಮಿಕಾ ಮಂದಣ್ಣ ತಮ್ಮ ಅಭಿಮಾನಿಗಳ ನಡುವೆ ನಿಂತು ಸಖತ್ ಸ್ಟೆಪ್ ಹಾಕಿದ್ದಾರೆ. ತಮ್ಮ ವಾರಿಸು ಚಿತ್ರದ ಹಿಟ್ ಸಾಂಗ್ ರಂಜಿತಮೆಗೆ ನಟಿ ಮೈ ಬಳುಕಿಸಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಮೆಚ್ಚಿನ ನಟ ದಳಪತಿ ವಿಜಯ್ ಜೊತೆ ಸ್ಕ್ರೀನ್ ಶೇರ್ ಮಾಡಿರುವ ಚಿತ್ರವಿದು.