ಕನ್ನಡ ಚಿತ್ರರಂಗದಲ್ಲಿ ಡೆಡ್ಲಿ ಸೋಮ ಅಂತಾ ಕರೆಯಿಸಿಕೊಂಡಿರುವ ನಟ ಆದಿತ್ಯ ತನ್ನ ನಟನೆ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಸದ್ಯ ಟೆರರ್ ಚಿತ್ರದ ಶೂಟಿಂಗ್ನಲ್ಲಿರೋ ಅದಿತ್ಯ ಈಗ ಸೈಲೆಂಟ್ ಆಗಿ ಕಾಂಗರೂ ಸಿನಿಮಾದ ಶೂಟಿಂಗ್ ಮುಗಿಸಿದ್ದಾರೆ. ರೌಡಿಸಂ ಪಾತ್ರಗಳಿಂದ ಗಮನ ಸೆಳೆಯುತ್ತಿದ್ದ ಅದಿತ್ಯ ಮತ್ತೆ ಖಾಕಿ ಖದರ್ನಲ್ಲಿ ಕಾಂಗರೂ ಚಿತ್ರದ ಮೂಲಕ ಅಬ್ಬರಿಸಲಿದ್ದಾರೆ.
ಕಿಶೋರ್ ಮೇಗಳಮನೆ ನಿರ್ದೇಶನದ ಕಾಂಗರೂ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆದಿತ್ಯ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ರಂಜನಿ ರಾಘವನ್ ಅಭಿನಯಿಸಿದ್ದು, ಸೈಕಿಯಾಟ್ರಿಸ್ಟ್ ಡಾಕ್ಟರ್ ಪಾತ್ರ ನಿರ್ವಹಿಸಿದ್ದಾರೆ. ಶಿವಮಣಿ, ಕರಿಸುಬ್ಬು, ನಾಗೇಂದ್ರ ಅರಸ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಈ ಬಗ್ಗೆ ಮಾತನಾಡಿರೋ ನಿರ್ದೇಶಕ ಕಿಶೋರ್ ಮೇಗಳಮನೆ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ ನಮ್ಮ ಚಿತ್ರ ಸ್ವಲ್ಪ ವಿಭಿನ್ನ ಮತ್ತು ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ಗಾಗಿ ಮಾಡಿರುವ ಕಥೆವಿದು. ಇನ್ನು "ಕಾಂಗರೂ" ಶೀರ್ಷಿಕೆ ಕುರಿತು ಹೇಳುವುದಾದರೆ, "ಕಾಂಗರೂ" ಒಂದು ಮುಗ್ಧ ಪ್ರಾಣಿ. ಅದು ಯಾರಿಗೂ ಏನು ಮಾಡುವುದಿಲ್ಲ. ಮತ್ತು ಈ ಕಾಂಗರೂ ತನ್ನ ಮರಿಗೆ ಜನ್ಮ ನೀಡಿದ ನಂತರ ಅದರ ಹೊಟ್ಟೆಯ ಮೇಲ್ಭಾಗದಲ್ಲಿ ಇರುವ ಚೀಲದಲ್ಲಿ ಆ ಮರಿಯನ್ನು ಇಟ್ಟುಕೊಂಡು ಕಾಪಾಡುತ್ತದೆ. ಅಂತ ಸಮಯದಲ್ಲಿ ತನ್ನ ಮರಿಯ ತಂಟೆಗೆ ಯಾರಾದರೂ ಹೋದರೆ ಅದು ಯಾರನ್ನು ಬಿಡುವುದಿಲ್ಲ. ಈ ಪ್ರಾಣಿಯ ನಡವಳಿಕೆಯನ್ನು ಹೋಲುವ ಸಿನಿಮಾ ಕಥೆಯಾಗಿರುತ್ತದೆ ಎಂದರು.
ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕ ಕಿಶೋರ್ ಮೇಗಳಮನೆ ಅವರೇ ಬರೆದಿದ್ದಾರೆ. ಉದಯ್ ಲೀಲ ಛಾಯಾಗ್ರಹಣ ಹಾಗೂ ಅರ್ಜುನ್ ಕಿಟ್ಟು ಸಂಕಲನ ಈ ಚಿತ್ರಕ್ಕಿದೆ. ಆರೋಹ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚನ್ನಕೇಶವ ಬಿ.ಸಿ, ನರಸಿಂಹಮೂರ್ತಿ ಚಕ್ರಭಾವಿ, ರಮೇಶ್ ಬಂಡೆ, ಸ್ವಾಮಿ ಚಕ್ರಭಾವಿ, ರವಿ ಕೀಲರ ಮಂಡ್ಯ ಹಾಗೂ ಕೆ ಜಿ ರಾಮಚಂದ್ರಯ್ಯ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಹೊರನಾಡು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ. ಸದ್ಯ ಕಾಂಗರೂ ಚಿತ್ರತಂಡ ಡಬ್ಬಿಂಗ್ ಮಾಡೋದರಲ್ಲಿ ನಿರತವಾಗಿದೆ. ಅದಷ್ಟು ಬೇಗ ಬೆಳ್ಳಿ ತೆರೆಗೆ ಬರುವುದಕ್ಕೆ ಚಿತ್ರ ತಂಡ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಿದೆ.
ಇದನ್ನೂ ಓದಿ :'ರೋಜಿ'ಗಾಗಿ ಒಂದಾದ ಲೂಸ್ ಮಾದ ಯೋಗಿ-ಶ್ರೀನಗರ ಕಿಟ್ಟಿ